CHITRADURGA NEWS | 09 SEPTEMBER 2026
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬಲ್ಲಾಳಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬೆಲಗೂರು, ಸಿ.ಕೋಡಿಹಳ್ಳಿ ಹಾಗೂ ಕೆರೆಹೊಸಹಳ್ಳಿ ಅಂಗನವಾಡಿ ಕೇಂದ್ರಗಳಲ್ಲಿ ಈಚೆಗೆ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದನ್ನೂ ಓದಿ: ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ ಮಾತನಾಡಿ, ಗರ್ಭಿಣಿಯರು ಹಾಗೂ ಮಕ್ಕಳ ತಾಯಂದಿರು ಪೌಷ್ಟಿಕ ಮತ್ತು ಸಮತೋಲನ ಆಹಾರ ಸೇವಿಸುವ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ಕಡಿಮೆ ತೂಕ ತಡೆಗಟ್ಟುವುದು, ರಕ್ತಹೀನತೆ ನಿಯಂತ್ರಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶಗಳಾಗಿವೆ ಎಂದರು.
ಕೈ ತೊಳೆಯುವಿಕೆ, ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿಯುವ ನೀರಿನ ಬಳಕೆ ಹಾಗೂ ನೈರ್ಮಲ್ಯದ ಮಹತ್ವದ ಕುರಿತು ಅವರು ಅರಿವು ಮೂಡಿಸಿದರು.
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿರ್ಮಲ ಅವರು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ: ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸರಿತ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಖಾ, ಸಮುದಾಯ ಆರೋಗ್ಯ ಅಧಿಕಾರಿ ಸಾದತ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

