
CHITRADURGA NEWS | 22 JULY 2026
ಚಿತ್ರದುರ್ಗ: ಆದಿ ಗುರು ಶಂಕರಾಚಾರ್ಯರ ಬಗ್ಗೆ ಅವಹೇಳನವಾಗಿ ಮಾತನಾಡಿ, ಅನಗತ್ಯ ವಿವಾದ ಉಂಟು ಮಾಡಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗ ಬ್ರಾಹ್ಮಣ ಸಂಘ ಹಾಗೂ ಶಂಕರ ತತ್ವ ಅಭಿಯಾನ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಕಚೇರಿ ಸಹಾಯಕರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಉಡುಪಿಯ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾಲಕ್ಷೇಪದ ಸಮಾರಂಭದಲ್ಲಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ, ಶಂಕರರು ರಚಿಸಿರುವ ಕೃತಿಗಳು ದುಶಾಸ್ತ್ರ ಎಂಬುದಾಗಿ ಸಮಾಜಕ್ಕೆ ತಪ್ಪು ಸಂದೇಶ ನೀಡಿರುವುದನ್ನು ಬ್ರಾಹ್ಮಣರು ಸಹಿಸುವುದಿಲ್ಲ.
ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿರುವುದು ಹಿಂದೂ ಬಾಂಧವರ ಮತ್ತು ಸನಾನತ ಧರ್ಮದ ಸಂಸ್ಥಾಪಕ ಶ್ರೀಮದ್ ಜಗದ್ಗುರು ಶಂಕರಾಚಾರ್ಯರ ಅನುಯಾಯಿಗಳ ಶ್ರದ್ದಾ, ಭಕ್ತಿ, ನಂಬಿಕೆಗೆ ತೀವ್ರ ಆಘಾತವನ್ನುಂಟು ಮಾಡಿದೆ.
ದೈವಾಂಶ ಸಂಭೂತರಾದ ಆಚಾರ್ಯತ್ರಯರು ಸಮಾಜದಲ್ಲಿ ಪರಸ್ಪರ ಸಾಮರಸ್ಯ ಮೂಡಿಸಿದ್ದಾರೆ. ಅವರು ಪ್ರತಿಪಾದಿಸಿದ ಅದ್ವೈತ ತತ್ವವು ಕಲ್ಪಿತವಾದುದಲ್ಲ. ವೇದಶಾಸ್ತ್ರ ಪುರಾಣಗಳಲ್ಲಿ ಪ್ರತಿಪಾದಿತವಾದ ಅದ್ವೈತತ್ವವನ್ನೇ ಪರಮ ಕಾರುಣ್ಯದಿಂದ ನಮಗೆ ತಿಳಿಸಿಕೊಟ್ಟಿದ್ದಾರೆ.
ಅಂತಹ ಮಹಾತ್ಮರಿಗೆ ಆಗಿರುವ ನಿಂದನೆ ಧರ್ಮಾಭಿಮಾನಿಗಳ ಭಕ್ತಿಗೆ ಧಕ್ಕೆಯುಂಟಾಗಿದೆ. ಇಂತಹ ಘಟನೆಗಳು ಇನ್ನು ಮುಂದೆ ಮರುಕಳಿಸಬಾರದು ಎಂದು ಬ್ರಾಹ್ಮಣ ಸಂಘದವರು ಒತ್ತಾಯಿಸಿದರು.
ಇದನ್ನೂ ಓದಿ: KDP ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಪ್ರತಿಭಟನೆಯಲ್ಲಿ ಚಿತ್ರದುರ್ಗ ಬ್ರಾಹ್ಮಣ ಸಂಘದ ಕಾರ್ಯದರ್ಶಿ ಡಿ.ಜಿ.ಪ್ರಾಣೇಶ್‍ರಾವ್, ನಿರ್ದೇಶಕರಾದ ಕೆ.ಹೆಚ್.ಶಂಕರ್, ದಿವಾಕರ್, ರಾಘವೇಂದ್ರ, ಶಾಂಕರ ತತ್ವ ಪ್ರಸಾರ ಅಭಿಯಾನ ಚಿತ್ರದುರ್ಗ ಜಿಲ್ಲಾ ಸಂಚಾಲಕಿ ಉಷ, ತಾಲ್ಲೂಕು ಸಂಚಾಲಕರಾದ ವೆಂಕಟೇಶ್ ದೀಕ್ಷಿತ್, ಜ್ಯೋತಿ, ಚಳ್ಳಕೆರೆ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಅನಂತರಾಮ್ ಗೌತಮ್, ಹೊಸದುರ್ಗ ಬ್ರಾಹ್ಮಣ ಸಂಘದ ಅಧ್ಯಕ್ಷ ಚಂದ್ರಪ್ರಕಾಶ್, ಹಿರಿಯೂರು ಕಾರ್ಯದರ್ಶಿಗಳಾದ ವೆಂಕಟೇಶ್ ದೀಕ್ಷಿತ್, ಅಧ್ಯಕ್ಷ ಸ್ವಾಮಿನಾಥ್ ಇತರರು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

