Connect with us

    ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

    ಮುಖ್ಯ ಸುದ್ದಿ

    ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 23 APRIL 2025

    ಚಿತ್ರದುರ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

    Also Read: ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್

    ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿಗೆ ಮನವಿ ರವಾನಿಸಲಾಯಿತು.

    ಕೇಂದ್ರ ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯ ತಲೆದಂಡವಾಗಬೇಕು. 2019 ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಇದು ಎರಡನೆ ಅತ್ಯಂತ ಭೀಕರ ದಾಳಿಯಾಗಿದೆ.

    ಹಿಂದೂಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರನ್ನು ಸದೆ ಬಡಿಯಬೇಕು. ಆಗ ಬಲಿಯಾದವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗುತ್ತದೆ. ದಾಳಿಯಲ್ಲಿ ಬಲಿಯಾದವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು. ಜೊತೆಗೆ ಮೃತರಿಗೆ ತಲಾ ಒಂದು ಕೋಟಿ ರೂ.ಗಳ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

    Also Read: ಸಿರಿಗೆರೆಯಲ್ಲಿ ಏ.25 ರಂದು ಕನ್ನಡ ಕರಡು ತಿದ್ದುವ ಕಾರ್ಯಾಗಾರ

    ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾಧ್ಯಕ್ಷೆ ವೀಣಗೌರಣ್ಣ, ಗೋಪಿನಾಥ್, ಕಮಲಮ್ಮ, ಅವಿನಾಶ್, ತಿಪ್ಪೇಸ್ವಾಮಿ, ನಾಗೇಶ್, ನಾಗರಾಜ್ ಮುತ್ತು, ಶಶಿ, ವಿಜಯಬಾಬು, ಪ್ರದೀಪ್, ಹರೀಶ್‍ಕುಮಾರ್, ಅಖಿಲೇಶ್ ಪಾಲ್ಗೊಂಡಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top