
CHITRADURGA NEWS | 12 JULY 2024
ಚಿತ್ರದುರ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಯಿಂದ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೇ ಆಯ್ಕೆ ಮಾಡಬೇಕು.
ಕಾಲಾ ಕಾಲೇಜು ಸಮಯದಲ್ಲಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿಯನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಸೂಚಿಸಬೇಕು.
ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು. ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು ಎಂದು ಅಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿಯ ನಗರ ಕಾರ್ಯದರ್ಶಿ ಗೋಪಿ, ಸದಸ್ಯ ಕನಕರಾಜ್ ಕೋಡಿಹಳ್ಳಿ, ಚಿತ್ರಸ್ವಾಮಿ, ಮಹಿಳಾ ಪ್ರಮುಖ್ ಚೈತ್ರ, ಕಾರ್ಯಕರ್ತರು ಚರಣ್, ಕಾರ್ತಿಕ್, ಸಂಜಯ್, ಚಂದನ, ಚಂದ್ರಕಲಾ, ತಿಪ್ಪೇಶ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
