ಮುಖ್ಯ ಸುದ್ದಿ
ಜನಿವಾರ ವಿವಾದ | ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡನೆ
CHITRADURGA NEWS | 19 APRIL 2025
ಚಿತ್ರದುರ್ಗ: ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿರುವ ನಡೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
Also Read: ಪ್ರತಿಷ್ಠಿತ ಶಾಲೆ ಪ್ರವೇಶ | ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ
ಶನಿವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಬ್ರಾಹ್ಮಣ ಸಮುದಾಯದ ಮುಖಂಡರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೀದರ್‌ನಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ಧರಿಸಿದ್ದ ಕಾರಣಕ್ಕೆ, ಸಿಇಟಿ ಪರೀಕ್ಷೆಗೆ ಅವಕಾಶ ಕಲ್ಪಿಸದ ಕಾರಣ ವಿದ್ಯಾರ್ಥಿಯ ಭವಿಷ್ಯಕ್ಕೆ ತೊಂದರೆಯಾಗಿದೆ. ಇದನ್ನು ಬ್ರಾಹ್ಮಣ ಮಹಾಸಭಾ ಗಂಭಿರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಸಿದರು.
ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆದ ಈ ಕೃತ್ಯಗಳು ಸಮುದಾಯದ ಮೇಲೆ ನಡೆದ ಪ್ರಹಾರವಾಗಿವೆ. ನಮ್ಮ ಸಂಸ್ಕೃತಿ, ಧರ್ಮಾಚರಣೆಗೆ ನಿರ್ಬಂಧ ಹೇರಿದಂತಾಗುತ್ತದೆ. ಇದನ್ನು ಸರ್ವತಾ ಒಪ್ಪುವುದಿಲ್ಲ. ಇದನ್ನು ಪ್ರತಿಭಟಿಸುತ್ತೇವೆ ಎಂದರು.
Also Read: ಉಗುರಿನ ಮೇಲೆ ಕಪ್ಪು ಗೆರೆ ಕಾಣಿಸಿಕೊಳ್ಳಲು ಕಾರಣವೇನು?
ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಜಾತಿ ಗಣತಿ ವರದಿ ಪರಿಗಣಿಸಬಾರದು:
2015ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಆಯೋಗದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿಯಲ್ಲಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಸಂಖ್ಯೆಯನ್ನು 15 ಲಕ್ಷ ಎಂದು ನಮೂದಿಸಲಾಗಿದೆ.
ಆದರೆ, ರಾಜ್ಯದಲ್ಲಿ ಬ್ರಾಹ್ಮಣರ ಸಂಖ್ಯೆ 45 ಲಕ್ಷಕ್ಕೂ ಹೆಚ್ಚಾಗಿದೆ. ಇಷ್ಟು ದೊಡ್ಡ ಸಂಖ್ಯೆ ಇದ್ದರೂ ಕಡಿಮೆ ತೋರಿಸುವ ಮೂಲಕ ಸಮುದಾಯಕ್ಕೆ ಅವಮಾನ ಮಾಡಲಾಗುತ್ತಿದೆ. ಇದನ್ನು ಮಹಾಸಭಾ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಜಾತಿ ಸಮೀಕ್ಷೆಯನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಬಾರದು. ಸಮುದಾಯದ ಮೇಲೆ ಈ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಜಾಗರೂಕತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
Also Read: ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡಂಗಡಿಗಳ ತೆರವುಗೊಳಿಸಲು ಸೂಚನೆ
ಈ ವೇಳೆ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ಟಿ.ಕೆ.ನಾಗರಾಜ್‌ರಾವ್, ಬ್ರಾಹ್ಮಣ ಸಂಘದ ನಿರ್ದೇಶಕರಾದ ಮೋಹನ್ ಭಟ್, ಫಣೀಂದ್ರ ಮುಖಂಡರಾದ ಮಾರುತಿ ಮೋಹನ್. ಡಾ.ಕೆ.ರಾಜೀವಲೋಚನ್, ಎಂ.ಎಸ್.ಕುಮಾರ್, ಲಕ್ಷ್ಮೀ, ನವೀನ್, ಹಿರಿಯೂರಿನ ವೆಂಕಟೇಶ್ ದೀಕ್ಷಿತ್ ಇತರರಿದ್ದರು.