ಮುಖ್ಯ ಸುದ್ದಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

CHITRADURGA NEWS | 20 DECEMBER 2024
ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಸಂಸತ್‍ನಲ್ಲಿ ಕೀಳಾಗಿ ಮಾತನಾಡಿ ಸಂವಿಧಾನಕ್ಕೆ ಅಗೌರವ ತೋರಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಕ್ಲಿಕ್ ಮಾಡಿ ಓದಿ: ವಾಣಿವಿಲಾಸ ಸಾಗರದ ನೀರಿನ ಮಟ್ಟ ಹೆಚ್ಚಳ | ಇಂದಿನ ನೀರಿನ ಮಟ್ಟ

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸಂವಿಧಾನಕ್ಕೆ ಅವಮಾನ ಮಾಡುತ್ತಲೆ ಬರುತ್ತಿದೆ.
ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡದಿದ್ದರೆ ಅಮಿತ್ ಶಾ ಕೇಂದ್ರ ಮಂತ್ರಿಯಾಗುತ್ತಿರಲಿಲ್ಲ. ಮೊದಲಿನಿಂದಲೂ ಸಂವಿಧಾನವನ್ನು ಬದಲಾಯಿಸುವುದಾಗಿ ಹೇಳಿಕೊಂಡು ಬರುತ್ತಿರುವ ಕೋಮುವಾದಿ ಬಿಜೆಪಿ ದಲಿತ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದೆ.
ಪ್ರಧಾನಿ ಮೋದಿ ಈ ವಿಚಾರವನ್ನು ಹಗುರವಾಗಿ ತೆಗೆದುಕೊಳ್ಳಬಾರದು, ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಕಾಂಗ್ರೆಸ್‍ನಿಂದ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ ರೇಟ್
ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ, ಸಂಸತ್‍ನಲ್ಲಿ ಸಂವಿಧಾನ ಕುರಿತು ಚರ್ಚಿಸುತ್ತಿದ್ದ ವೇಳೆಯಲ್ಲಿ ಅಮಿತ್ ಶಾ ಅಂಬೇಡ್ಕರ್ ಅವರನ್ನು ಜಪಿಸುವ ಬದಲು ದೇವರ ನಾಮಸ್ಮರಣೆ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆಂದು ಹೇಳಿ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ. ಕೂಡಲೆ ಅವರನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್ ಯುವ ಮುಖಂಡ ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ, ಹನುಮಲಿ ಷಣ್ಮುಖಪ್ಪ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

M ANJINAPPA
21 December 2024 at 09:55
ಇವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗಾಗಿ ಪೂರ್ವ ಪರಿಶೀಲನೆ ಮಾಡದೆ ಪ್ರತಿಭಟನೆ ಮಾಡ್ತಾ ಇದಾರೆ. ನಿಜವಾದ ಡಾ ಬಿ ಆರ್ ಅಂಬೇಡ್ಕರ್ ಅಭಿಮಾನಿಗಳು ಆಗಿದ್ರೆ ಪ್ರತಿಭಟನೆ ನಡೆಸುತ್ತಿರಲಿಲ್ಲ. ವಿಚಾರನೆ ಗೊತ್ತಿಲ್ಲದೆ ಕೇಂದ್ರ ಮಂತ್ರಿಗಳ ವಿರುದ್ದ ಪ್ರತಿಭಟನೆ ಹಾಸ್ಯಾಸ್ಪದ. ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ರವರಿಗೆ ಮಾಡಿದ ಅವಮಾನ ಜನ ಮರೆತಿಲ್ಲ.