Connect with us

ಸಿ.ಟಿ.ರವಿ ವಿರುದ್ಧ ಚಿತ್ರದುರ್ಗದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಪ್ರತಿಭಟನೆ | ಪಂಚಮಸಾಲಿ ಸಮಾಜದ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ವಾಗ್ದಾಳಿ

Lakshmi Hebbalkar fans protest

ಮುಖ್ಯ ಸುದ್ದಿ

ಸಿ.ಟಿ.ರವಿ ವಿರುದ್ಧ ಚಿತ್ರದುರ್ಗದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಪ್ರತಿಭಟನೆ | ಪಂಚಮಸಾಲಿ ಸಮಾಜದ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ವಾಗ್ದಾಳಿ

CHITRADURGA NEWS | 21 DECEMBER 2024

ಚಿತ್ರದುರ್ಗ: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಸಿ.ಟಿ.ರವಿ ವಿರುದ್ದ ಧಿಕ್ಕಾರ ಕೂಗಿದರು.

ಇದನ್ನೂ ಓದಿ: 129.15 ಅಡಿ ತಲುಪಿದೆ ವಿವಿ ಸಾಗರ ಜಲಾಶಯ ಮಟ್ಟ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಕೊನೆಯ ದಿನದ ಅಧಿವೇಶನದಲ್ಲಿ ಸಿ.ಟಿ.ರವಿ ಆಡಿರುವ ಮಾತು ಲಕ್ಷ್ಮೀ ಹೆಬ್ಬಾಳ್ಕರ್ ಮನಸ್ಸಿಗೆ ಘಾಸಿ ಮಾಡಿವೆ. ಆದ್ದರಿಂದ ಸಿ.ಟಿ.ರವಿಯನ್ನು ವಿಧಾನಪರಿಷತ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಿ ಜೈಲಿಗೆ ಕಳುಹಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: ನಿಮ್ಮ ಕಷ್ಟ ಕಾಲದಲ್ಲಿ ಜೊತೆಗಿದ್ದು ಋಣ ತೀರಿಸುತ್ತೇನೆ | ಕಾರ್ಯಕರ್ತರಿಗೆ ಸಿ.ಟಿ.ರವಿ

ಪ್ರತಿಭಟನೆ ನೇತೃತ್ವ ವಹಿಸಿದ್ದ ಪಂಚಮಸಾಲಿ ಸಮಾಜದ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ದಾಳಿಂಬೆ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಹೆಸರೇಳುವ ಬದಲು ದೇವರ ಹೆಸರು ಜಪಿಸಿದ್ದರೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಹೇಳಿರುವ ಬೆನ್ನಲ್ಲೇ ಸಿ.ಟಿ.ರವಿ ಅಸಭ್ಯವಾಗಿ ಮಾತನಾಡಿರುವುದನ್ನು ನೋಡಿದರೆ ಇವರಿಬ್ಬರು ಮನುಸ್ಮøತಿಯವರು ಎನ್ನುವುದು ಗೊತ್ತಾಗುತ್ತದೆ. ಹಾಗಾಗಿ ಇವರುಗಳು ತಕ್ಷಣವೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಟೈಯರ್ ಬ್ಲಾಸ್ಟ್ | ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ | ಪ್ರಯಾಣಿಕರು ಬಚಾವ್

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಮೇಶ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ಮುಖಂಡರಾದ ಹನೀಸ್, ಕಾರ್ತಿಕ್, ಮೋಕ್ಷಾ ರುದ್ರಸ್ವಾಮಿ, ಮುನಿರಾ ಎ.ಮಕಾಂದಾರ್, ವಿಜಯಕುಮಾರ್, ನೇತ್ರಾವತಿ, ಕುಮಾರ್, ಗಿರೀಶ್, ಜಗದೀಶ್, ದರ್ಶನ್, ಸುನಿತಾ ಮತ್ತಿತರರಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version