ಮುಖ್ಯ ಸುದ್ದಿ
EXAM FEES; ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ LAW ವಿದ್ಯಾರ್ಥಿಗಳಿಂದ ಪ್ರತಿಭಟನೆ
CHITRADURGA NEWS | 23 JULY 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪರೀಕ್ಷಾ ಶುಲ್ಕ(EXAM FEES) ಮಾಡಿದ್ದು, ಶುಲ್ಕ ಕಡಿಮೆ ಮಾಡುವಂತೆ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: Upper Bhadra Project: ಭದ್ರಾ ಮೇಲ್ದಂಡೆ | 25 ರಂದು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪರೀಕ್ಷಾ ಶುಲ್ಕವನ್ನು ಮರುಪಾವತಿ ಹಾಗೂ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನವನ್ನು ಕಡಿತ ಮಾಡಿರುವುದನ್ನು ವಿರೋಧಿಸಿ ಪ್ರತಿಭಟಿಸಿದರು.
ಹಿಂದಿನ ವರ್ಷದಲ್ಲಿ ಇದ್ದಂತಹ ಪರೀಕ್ಷಾ ಶುಲ್ಕ ಪ್ರಸ್ತುತ ವರ್ಷದ ಪರೀಕ್ಷಾ ಶುಲ್ಕವನ್ನೆ ಮುಂದುವರೆಸಿಕೊಂಡು ಹೋಗಬೇಕು ಎಂದು ಅಗ್ರಹಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನ ಸರಿಯಾದ ರೀತಿಯಲ್ಲಿ ಹಂಚಿಕೆ ಆಗಿಲ್ಲ, ಸಮಾಜ ಕಲ್ಯಾಣ ಇಲಾಖೆಯವರು ಕಡಿತ ಮಾಡಿದ ವಿದ್ಯಾರ್ಥಿ ವೇತನವನ್ನು ಕೂಡಲೇ ಸಂಬಂಧಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಸಂಬಂಧಪಟ್ಟ ಇಲಾಖೆಯವರು ಕಾನೂನಾತ್ಮಕ ಅಗತ್ಯ ಕ್ರಮಗಳನ್ನು ವಹಿಸಿ. ಹೆಚ್ಚುವರಿಯಾದ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡುವುದು ಹಾಗೂ ವಿದ್ಯಾರ್ಥಿವೇತನವನ್ನು ಮಂಜೂರು ಮಾಡುವಂತೆ ಮನವಿ ಮಾಡಲಾಯಿತು.
ಇದನ್ನೂ ಓದಿ: Medical college; ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ನೋಟೀಸ್ | MLC ಕೆ.ಎಸ್.ನವೀನ್ ಆಕ್ರೋಶ
ಈ ಸಂದರ್ಭದಲ್ಲಿ ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.