CHITRADURGA NEWS | 27 April 2026
ಚಿತ್ರದುರ್ಗ: ಡಿಎಪಿ ಮತ್ತು ಯೂರಿಯಾ ಗೊಬ್ಬರದ ಜೊತೆಗೆ ಒತ್ತಾಯವಾಗಿ ಬೇರೆ ಉತ್ಪನ್ನಗಳನ್ನು ಲಿಂಕ್ ಮಾಡಿ ಮಾರಾಟಕ್ಕೆ ನೀಡುವುದನ್ನು ನಿಲ್ಲಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೀಡ್ಸ್ ಕೆಮಿಕಲ್ಸ್ ಫರ್ಟಿಲೈಜರ್ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | 27 ಏಪ್ರಿಲ್ | ಇಂದಿನ ಮಾರುಕಟ್ಟೆ ವಿವರ
ಎಲ್ಲಾ ರಸಗೊಬ್ಬರಗಳ ಎಂಆರ್‌ಪಿ ಮೇಲೆ ಶೇ.8 ಡೀಲರ್ ಲಾಭಾಂಶವಿರುವಂತೆ ನೋಡಿಕೊಳ್ಳಬೇಕು. ಗೊಬ್ಬರ, ಬೀಜ, ಕೀಟನಾಶಕ ಸ್ಯಾಂಪಲ್ ಕಳಪೆ ಬಂದಾಗ ಕಂಪನಿಯವರ ಮೇಲೆ ಮಾತ್ರ ಕೇಸ್ ಹಾಕಿ ಡೀಲರ್‌ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಡೀಲರ್‌ಗಳಿಂದ ಸ್ಯಾಂಪಲ್ ಡ್ರಾ ಮಾಡಿದಾಗ ಸ್ಯಾಂಪಲ್‌ನಲ್ಲಿನ ಹಣವನ್ನು ಕಡ್ಡಾಯವಾಗಿ ಡೀಲರ್‌ಳಿಗೆ ಪಾವತಿಸಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳು ತಪಾಸಣೆಗಾಗಿ ಅಂಗಡಿಗಳಿಗೆ ಭೇಟಿ ಕೊಟ್ಟ ನಂತರ ಮಾಧ್ಯಮಗಳಿಗೆ ಹೇಳಿಕೆಗಳನ್ನು ಕೊಡುವಾಗ ದಾಳಿ ಎನ್ನುವ ಪದ ಮತ್ತು ಅಂಗಡಿಗಳ ಫೋಟೋಗಳನ್ನು ಬಳಸಬಾರದು. ಎಫ್‍ಐಡಿ ಮುಖಾಂತರ ಯೂರಿಯಾ ಗೊಬ್ಬರ ಮಾರಾಟ ಮಾಡುವ ಆದೇಶವನ್ನು ಸ್ವಾಗತಿಸುತ್ತೇವೆ. ನೀರಾವರಿ ಮತ್ತು ಒಣ ಬೇಸಾಯಗಾರರಿಗೆ ಬೆಳೆಗಳ ಆಧಾರದ ಮೇಲೆ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕು.
ಎಫ್‍ಐಡಿ ಮುಖಾಂತರ ಡಿಎಪಿ ಮತ್ತು ಯೂರಿಯಾ ಮಾರಾಟ ಮಾಡುವುದನ್ನು ಹಿಂಗಾರು ಬೆಳೆಗಳವರೆಗೆ ಕಡ್ಡಾಯಗೊಳಿಸಬೇಕು. ಬೀಜ ಮಾರಾಟ ಯ್ಯಾಪನ್ನು ಮಾರಾಟ ಸ್ನೇಹಿಯಾಗಿ ರೂಪಿಸಬೇಕೆಂದು ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
ವರ್ತಕರಾದ ಜಗದೀಶ್, ಸಿದ್ದಲಿಂಗಮೂರ್ತಿ, ಮಂಜುನಾಥ್, ಬಸವರಾಜ್, ಹರ್ಷ, ಅಶೋಕ್, ಗಿರೀಶ್, ತಿಪ್ಪೇಸ್ವಾಮಿ, ಚಿದಾನಂದ, ಮನೋಜ್‍ಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
