ಮುಖ್ಯ ಸುದ್ದಿ
Protest; ಸಿದ್ದರಾಮಯ್ಯ ವಿರುದ್ಧದ ಕುತಂತ್ರ ಖಂಡಿಸಿ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ

CHITRADURGA NEWS | 29 AUGUST 2024
ಚಿತ್ರದುರ್ಗ: ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಪಾಲರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaia) ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕುತಂತ್ರ ನಡೆಸುತ್ತಿರುವುದನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ(Communist Party) ಪ್ರತಿಭಟನೆ(Protest) ನಡೆಸಿತು.
ಕ್ಲಿಕ್ ಮಾಡಿ ಓದಿ: Interview; ನಿರುದ್ಯೋಗಿಗಳಿಗೆ GOOD NEWS | ನೇರ ನೇಮಕಾತಿ ಸಂದರ್ಶನ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಜಯಣ್ಣ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಮೂಡಾ ಪ್ರಕರಣ ಹಾಗೂ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ.ಗಳ ಹಗರಣವನ್ನು ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯದ ಮುಖ್ಯ ಮಂತ್ರಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿರುವುದು ಸಂವಿಧಾನ ವಿರೋಧಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರು ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಸರಿಯಾದ ಕ್ರಮವಲ್ಲ. ಕೇರಳ, ತಮಿಳುನಾಡು, ಪಾಂಡಿಚೇರಿ, ಪಶ್ಚಿಮ ಬಂಗಾಳ, ರಾಜಸ್ಥಾನ ಇನ್ನು ಮುಂತಾದ ರಾಜ್ಯಗಳಲ್ಲಿ ರಾಜ್ಯಪಾಲರು ಹಾಗೂ ಚುನಾಯಿತ ಸರ್ಕಾರಗಳ ನಡುವೆ ಸಂಘರ್ಷ ನಡೆಯುತ್ತಿದೆ.
ಕ್ಲಿಕ್ ಮಾಡಿ ಓದಿ: Application; ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಅದೇ ರೀತಿ ಕರ್ನಾಟಕದಲ್ಲಿಯೂ ರಾಜ್ಯ ಸರ್ಕಾರ ಕೆಡವಲು ರಾಜ್ಯಪಾಲರು ಆಸಕ್ತಿ ವಹಿಸುತ್ತಿರುವುದರ ಹಿಂದೆ ಕೆಲವರ ಕೈವಾಡವಿದೆ ಎನ್ನುವುದನ್ನು ಬಹಿರಂಗಪಡಿಸಿ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು, ಜಿಲ್ಲಾ ಮಂಡಳಿ ಸದಸ್ಯರುಗಳಾದ ಕಾಂ.ಬಿ.ಬಸವರಾಜಪ್ಪ, ಕಾಂ.ಟಿ.ಆರ್.ಉಮಾಪತಿ, ಸಹ ಕಾರ್ಯದರ್ಶಿ ದೊಡ್ಡುಳ್ಳಾರ್ತಿ ಕರಿಯಪ್ಪ, ಕಾಂ.ಜಾಫರ್‌ಷರೀಫ್, ಕಾಂ.ಎಸ್.ಸಿ.ಕುಮಾರ್, ಕಾಂ.ಎಲ್.ಸಿ.ಕುಮಾರ್, ಕಾಂ.ಅಮೀನಾಭಿ, ಕಾಂ.ಹನುಮಂತಪ್ಪ, ಕಾಂ.ಈ.ಸತ್ಯಕೀರ್ತಿ, ಕಾಂ.ಎಂ.ಬಿ.ಜಯದೇವಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.
