CHITRADURGA NEWS | 05 MARCH 2025
ಚಿತ್ರದುರ್ಗ: ಕಳೆದ ನಾಲ್ಕು ದಿನಗಳ ಹಿಂದೆ ಸರ್ಕಾರಿ ಕಲಾ ಕಾಲೇಜು ಮುಂಭಾಗದ ರಸ್ತೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವವರನ್ನು ಗೂಂಡಾ ಕಾಯಿದೆಯಡಿ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
Also Read: ಕ್ರೀಡಾಂಗಣದಲ್ಲಿ ಬೇಸಿಗೆ ಶಿಬಿರಕ್ಕೆ ಅನುಮತಿ ಕಡ್ಡಾಯ
ಹಲ್ಲೆ ನಡೆಸಿದ ಭರತ್‍ರೆಡ್ಡಿ ಮತ್ತು ಸಹಚರರನ್ನು ಬಂಧಿಸಿ ಯಾವುದೇ ರೀತಿಯ ಕೇಸು ದಾಖಲಿಸದೆ ಕೈಬಿಟ್ಟಿರುವುದನ್ನು ನೋಡಿದರೆ ನಾಗರೀಕರಿಗೆ ಯಾವ ರೀತಿಯ ರಕ್ಷಣೆ ನೀಡಬಲ್ಲರು. ಪ್ರಮುಖ ಆರೋಪಿ ಭರತ್‍ರೆಡ್ಡಿ ಮತ್ತು ಸಹಚರರು ಜಿಲ್ಲಾ ಉಸ್ತುವಾರಿ ಸಚಿವರ ಹಿಂಬಾಲಕರುಗಳೆಂದು ಹೇಳಲಾಗುತ್ತಿದ್ದು, ರಾಜಕೀಯ ಒತ್ತಡಕ್ಕೆ ಪೊಲೀಸ್ ಇಲಾಖೆ ಮಣಿದಿರಬಹುದೆ ಎಂಬ ಅನುಮಾನ ಕಾಡುತ್ತಿದೆ.
ಪೊಲೀಸರ ಮೇಲೆ ಹಲ್ಲೆ ನಡೆಸಿರುವ ನಾಲ್ಕರ ಪೈಕಿ ಬಡಾವಣೆ ಠಾಣೆಯಲ್ಲಿ ಮೂವರ ವಿರುದ್ದ ಎಫ್.ಐ.ಆರ್.ದಾಖಲಾಗಿದ್ದು, ಭರತ್‍ರೆಡ್ಡಿಯನ್ನು ಕೈಬಿಟ್ಟಿರುವುದು ಯಾವ ಪುರುಷಾರ್ಥಕ್ಕೆ? ಪೊಲೀಸರಿಗೆ ಹೆಚ್ಚಿನ ಅಧಿಕಾರ ಮತ್ತು ರಕ್ಷಣೆ ನೀಡುವಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
Also Read: ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು
ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ಜಗದೀಶ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ನಾಗರಾಜ್ ಮುತ್ತು, ಮಧು, ಅಖಿಲೇಶ್, ಶಶಿ, ಮಧುಸೂದನ್, ಅವಿನಾಶ್, ನಾಗೇಶ್ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number