
CHITRADURGA NEWS | 21 APRIL 2025
ಚಿತ್ರದುರ್ಗ: ಹೈಕೋರ್ಟ್ ನಾ ಹಿರಿಯ ವಕೀಲರಾದ ವೈ.ಆರ್.ಸದಾಶಿವರೆಡ್ಡಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವವರ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ, ವಕೀಲರುಗಳಿಗೆ ರಕ್ಷಣೆ ನೀಡುವಂತೆ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
Also Read: ಏ.25 ರಂದು ಚಿತ್ರದುರ್ಗಕ್ಕೆ ಜನಾಕ್ರೋಶ 3ನೇ ಹಂತದ ಯಾತ್ರೆ | ಛಲವಾದಿ ನಾರಾಯಣಸ್ವಾಮಿ


ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ತೋಳಿಗೆ ಕೆಂಪು ಪಟ್ಟಿ ಧರಿಸಿ ನ್ಯಾಯಾಲಯದ ಆವರಣದಿಂದ ಮೆರವಣಿಗೆ ಮೂಲಕ ಆಗಮಿಸಿದ ವಕೀಲರುಗಳು ಆರೋಪಿಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಭಾರತೀಯ ವಕೀಲರ ಪರಿಷತ್ತಿನ ಉಪಾಧ್ಯಕ್ಷ, ಕರ್ನಾಟಕ ವಕೀಲರ ಪರಿಷತ್ತಿನ ಸದಸ್ಯರಾಗಿರುವ ನ್ಯಾಯವಾದಿ ವೈ.ಆರ್.ಸದಾಶಿವರೆಡ್ಡಿ ಅವರ ಕಚೇರಿಗೆ ಕಳೆದ 14 ರಂದು ನುಗ್ಗಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
Also Read: ಭರ್ಜರಿ ಸುರಿದ ಅಶ್ವಿನಿ ಮಳೆ | ಮೊದಲ ಮಳೆಗೆ ತುಂಬಿ ಹರಿದ ಬ್ಯಾರೇಜ್
ವಕೀಲರುಗಳ ರಕ್ಷಣೆಗಾಗಿಯೇ ಕಾಯ್ದೆ ಜಾರಿಯಾಗಿದ್ದರೂ ವಕೀಲರುಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ಇನ್ನು ನಿಂತಿಲ್ಲ. ಇದರಿಂದ ವಕೀಲರುಗಳ ಸಮುದಾಯದಲ್ಲಿ ಭಯ ಮೂಡಿಸಿದೆ. ವಕೀಲರ ಸಂರಕ್ಷಣಾ ಕಾಯಿದೆಯನ್ನು ಇನ್ನಷ್ಟು ಬಲಪಡಿಸಿ ವಕೀಲರುಗಳ ಮೇಲೆ ಹಲ್ಲೆಯಾಗದಂತೆ ಸರ್ಕಾರ ಕಟ್ಟೆಚ್ಚರ ವಹಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಖಚಾಂಚಿ ಬಿ.ಇ.ಪ್ರದೀಪ್, ಜಂಟಿ ಕಾರ್ಯದರ್ಶಿ ಬಿ.ಗಿರೀಶ್ ಸೇರಿದಂತೆ ವಕೀಲರುಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
