Connect with us

ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ 

ಮುಖ್ಯ ಸುದ್ದಿ

ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ 

CHITRADURGA NEWS | 23 FEBRUARY 2025

ಚಿತ್ರದುರ್ಗ: ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಕಂಡಕ್ಟರ್ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿದರು.

Also Read: Kannada Novel: 21. ದುಷ್ಟನಿಂದ ದೂರ ಹೋದವರು

ಬಸ್ ನಿರ್ವಾಹಕ ಮಹಾದೇವ ಅವರ ಮೇಲೆ ಹಾಕಿರುವ ಪೋಕ್ಸೋ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬಸ್ ನಿರ್ವಾಹಕ ಮರಾಠಿಯಲ್ಲಿ ಮಾತನಾಡಲಿಲ್ಲ ಎನ್ನುವ ಕಾರಣಕ್ಕಾಗಿ ಮರಾಠಿಗರು ನಡೆಸಿರುವ ಹಲ್ಲೆಯಿಂದ ಬೆಳಗಾವಿ ಪೊಲೀಸರಿಗೂ ಗಾಯಗಳಾಗಿವೆ. ಮತ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ ಕೆಲವು ಸಮುದಾಯದವರನ್ನು ಓಲೈಸುವ ಬುದ್ದಿವಂತಿಕೆ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದರು.

ಗೃಹ ಸಚಿವರು ಪೊಲೀಸರ ಮೂಲಕ ಕನ್ನಡಿಗರ ಮೇಲೆ ಮನಬಂದಂತೆ ಕೇಸು ಹಾಕಿಸುತ್ತಿರುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು? ಬಸ್ ಕಂಡಕ್ಟರ್ ಮಹದೇವನ ಮೇಲೆ ಹಾಕಿರುವ ಪೋಕ್ಸೋ ಕೇಸನ್ನು ರದ್ದುಪಡಿಸಿ ಹಲ್ಲೆ ನಡೆಸಿರುವ ಮರಾಠಿಗರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗವುದು ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

Also Read: ಮೊಮ್ಮಗನ ನಾಮಕರಣದಲ್ಲಿ ಬಿಕ್ಕಿ ಬಿಕ್ಕಿ ಅತ್ತ ರೇಣುಕಸ್ವಾಮಿ ತಾಯಿ | ಮತ್ತೆ ಮಗ ಮನೆಗೆ ಬಂದಿದ್ದಾನೆ ಎಂದ ರತ್ನಪ್ರಭ

ಕರುನಾಡ ವಿಜಯಸೇನೆ ಕಾರ್ಯಕರ್ತರಾದ ಗೋಪಿನಾಥ್, ನಿಸಾರ್ ಅಹಮದ್, ಅಖಿಲೇಶ್, ಅವಿನಾಶ್, ಮುಜಾಹಿದ್, ರ‍್ರಿಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version