CHITRADURGA NEWS | 03 SEPTEMBER 2025
ಚಿತ್ರದುರ್ಗ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಪೆಮೋರಿಯನ್ ನಾಯಿ ಎಂದು ಕೀಳಾಗಿ ಮಾತನಾಡಿರುವ ಹರಿಹರ ಶಾಸಕ ಬಿ.ಪಿ. ಹರೀಶ್‍ಕುಮಾರ್ ಅವರ ಮೇಲೆ ಎಫ್.ಐ.ಆರ್.ದಾಖಲಿಸಿ, ಕೊಡಲೇ ಬಂಧಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿ, ಹೆಚ್ಚುವರಿ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಕೆಗೂ ಮುನ್ನ ಜಿಲ್ಲಾ ಪೊಲೀಸ್ ಕಚೇರಿಯ ಹೊರಗೆ ಶಾಸಕ ಬಿ.ಪಿ.ಹರೀಶ್ ಭಾವಚಿತ್ರ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: SEP, TSP ಅನುದಾನದಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಿ | ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಒತ್ತಾಯ
ದೇಶದ ಪ್ರಧಾನಿಯಿಂದ ಹಿಡಿದು ಜನಸಾಮಾನ್ಯರಿಗೆ ರಕ್ಷಣೆ ನೀಡುವ ಪೊಲೀಸರಿಗೆ ಅವರದೆ ಆದ ಗೌರವವಿರುತ್ತದೆನ್ನುವುದನ್ನು ಮರೆತಿರುವ ಹರಿಹರ ಶಾಸಕ ಬಿ.ಪಿ.ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಬಗ್ಗೆ ಹಗುರುವಾಗಿ ಮಾತನಾಡಿರುವುದು ಅವರ ಘನತೆಗೆ ತಕ್ಕುದಲ್ಲ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷರುಗಳಾದ ರತ್ನಮ್ಮ, ಮುಜಾಹಿದ್, ನಗರಾಧ್ಯಕ್ಷ ಅವಿನಾಶ್, ಕಾರ್ಯದರ್ಶಿ ಜಗದೀಶ್, ವಿದ್ಯಾರ್ಥಿ ಘಟಕದ ಅಖಿಲೇಶ್, ವಿಜಯಬಾಬು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
