Connect with us

    Nagamangala; ನಾಗಮಂಗಲ ಗಲಭೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

    ನಾಗಮಂಗಲ ಗಲಭೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

    ಮುಖ್ಯ ಸುದ್ದಿ

    Nagamangala; ನಾಗಮಂಗಲ ಗಲಭೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 13 SEPTEMBER 2024

    ಚಿತ್ರದುರ್ಗ: ಮಂಡ್ಯ ಜಿಲ್ಲೆ ನಾಗಮಂಗಲದ(Nagamangala) ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಚಿತ್ರದುರ್ಗ ನಾಗರಿಕರ ಸಮಿತಿ ಮತ್ತು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯಿತು.

    ಕ್ಲಿಕ್ ಮಾಡಿ ಓದಿ: FIR: ಬಸ್ಸಿನ ಟಾಪ್‍ನಲ್ಲಿ ಜನರ ಪ್ರಯಾಣ, ಚಾಲಕ, ಮಾಲಿಕರ ವಿರುದ್ಧ ದೂರು ದಾಖಲು

    ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ದಾಳಿ ಮತ್ತು ಮಾರಕಸ್ತ್ರ ಝಳಪಿಸಿ ಹಲ್ಲೆ ನಡೆಸಿರುವುದನ್ನು ಉನ್ನತ ಮಟ್ಟದ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಆಗ್ರಹ ಮಾಡಲಾಯಿತು.

    ಮೆರವಣಿಗೆ ವೇಳೆ ದರ್ಗಾ ಮುಂಭಾಗ ಗಣೇಶನ ಮೆರವಣ ಗೆ ನಡೆಸದಂತೆ ತಡೆಯಲು ಈ ರೀತಿಯ ಕೃತ್ಯ ಎಸಗಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ದೂರಿದರು.

    ತಕ್ಷಣ ಜಿಹಾದಿ ಮನಸ್ಥಿತಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು.

    ಈ ಕೃತ್ಯ ಉದ್ದೇಶಪೂರ್ವಕ ಹಾಗೂ ಪೂರ್ವ ಯೋಜಿತವಾಗಿದೆ. ಇದರಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇರುವ ಶಂಕೆಯಿದೆ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಲು ಪ್ರತಿಭಟನಾಕಾರರು ಆಗ್ರಹಿಸಿದರು.

    ಕ್ಲಿಕ್ ಮಾಡಿ ಓದಿ: DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 13 | ಮೌಲ್ಯದ ವಸ್ತು ಖರೀದಿ, ವ್ಯವಹಾರಗಳಲ್ಲಿ ಈಡೇರುವ ನಿರೀಕ್ಷೆ

    ಪ್ರತಿಭಟನೆಯಲ್ಲಿ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಬಿ.ನಯನ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಬಿಜೆಪಿ ಮುಖಂಡ ಜಿ.ಎಂ.ಸುರೇಶ್, ವಿಎಚ್‌ಪಿ ಮುಖಂಡ ಕೇಶವ, ಬಜಂಗದಳ ಪ್ರಾಂತ ಸಯೋಜಕ ಪ್ರಭಂಜನ್, ಪ್ರಸನ್ನ ಗಣಪತಿ ಸಮಿತಿ ಅಧ್ಯಕ್ಷ ಗೋಪಾಲರಾವ್ ಜಾದವ್, ಪದಾಧಿಕಾರಿಗಳಾದ ನಾಗರಾಜ್ ಬೇದ್ರೆ, ಮಂಜುನಾಥ್, ಭಾನುಮೂರ್ತಿ, ಸಂದೀಪ್ ಮತ್ತಿತರರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top