
CHITRADURGA NEWS | 20 JUNE 2024
ಹೊಸದುರ್ಗ: ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಘಟಕದಿಂದ ಹೊಸದುರ್ಗ ಪಟ್ಟಣದ ಟಿಬಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ತಡರಾತ್ರಿ ಬೊಲೆರೋ ಪಂಕ್ಚರ್ | ಟೈಯರ್ ಬದಲಿಸುವ ವೇಳೆ ಚಾಲಕನಿಗೆ ಆಗಿದ್ದೇನು..
ಪ್ರತಿಭಟನೆಯಲ್ಲಿ ರಾಜ್ಯ ಖನಿಜ ನಿಗಮ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ಮಾತನಾಡಿ, ಪೊಳ್ಳು ಭರವಸೆ ನೀಡಿ ಜನರಿಗೆ ವಂಚನೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಪೆಟ್ರೋಲ್ ಡೀಸೆಲ್ ದುಬಾರಿ ಮಾಡುವುದರ ಮುಖಾಂತರ ಭಾಗ್ಯಗಳಿಗೆ ಹಣ ನೀಡಲು ಸಾರ್ವಜನಿಕರನ್ನ ಲೂಟಿ ಮಾಡುತ್ತಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಾವಿರಾರು ಕೋಟಿ ಹಣವನ್ನ ಗ್ಯಾರಂಟಿ ಭಾಗ್ಯಗಳಿಗೆ ನೀಡಿ ದಲಿತರಿಗೆ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಕಲಿ ಖಾತೆ ಸೃಷ್ಟಿಸಿ ನೂರಾರು ಕೋಟಿ ಹಣ ದೋಚಿದ್ದಾರೆ.
ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ | ಬಿಜೆಪಿಯಿಂದ ಕಾರಿಗೆ ಹಗ್ಗ ಕಟ್ಟಿ ಪ್ರತಿಭಟನೆ
ಮುಂದಿನ ದಿನಗಳಲ್ಲಿ ಈ ಭ್ರಷ್ಟ ಸರ್ಕಾರವನ್ನ ಪ್ರಜೆಗಳೇ ಕಿತ್ತೆಸೆಯಲಿದ್ದಾರೆ. ಈಗಾಗಲೇ ಸಾವಿರಾರು ಕೋಟಿ ನಷ್ಟದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಬಡಜನರಿಗೆ ವಂಚಿಸಿ ಹಗಲು ದರೋಡೆ ಮಾಡುತ್ತಿದ್ದಾರೆ. ತಕ್ಷಣವೇ ಪೆಟ್ರೋಲ್ ಡೀಸೆಲ್ ದರದ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು ಇಲ್ಲದಿದ್ದರೆ ಅಹೋರಾತ್ರಿ ಧರಣಿ ಮಾಡುತ್ತೇವೆ ಎಂದು ಎಚ್ಚರಿಸಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರರು ಈಗಾಗಲೇ ಸಜ್ಜನ ಹಿರಿಯ ರಾಜಕಾರಣಿ ಗೋವಿಂದ ಕಾರಜೋಳ್ ರವರನ್ನ 48000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಅಭಿಮಾನಿಗಳು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇದ್ದಾರೆ ಎಂಬುದು ಇದರಿಂದ ಸಾಬೀತಾಗಿದೆ.
ಕೇವಲ ಹಣ ಮತ್ತು ಇನ್ನಿತರ ಮಾರ್ಗಗಳಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಮತದಾರ ಬಿಜೆಪಿ ಗೆಲ್ಲಿಸುವುದರ ಮೂಲಕ ತೋರಿಸಿದ್ದಾರೆ ಎಂದು ಬಿಜೆಪಿ ಮಂಡಲ ಉಪಾಧ್ಯಕ್ಷ ಲಿಂಗದೇವರು ಹೇಳಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಜೂ.20 ಗುರುವಾರದ ಅಡಿಕೆ ಮಾರುಕಟ್ಟೆ ರೇಟ್
ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಜಗದೀಶ್ ಗೂಳಿಹಟ್ಟಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ರಾಮಯ್ಯ, ಪುರಸಭಾ ಮಾಜಿ ಅಧ್ಯಕ್ಷ ಶ್ರೀನಿವಾಸ್, ಮಾಜಿ ಜಿ.ಪಂ ಸದಸ್ಯ ಗುರುಸ್ವಾಮಿ ಹೆಬ್ಬಳ್ಳಿ ಮಲ್ಲಿಕಾರ್ಜುನ್, ಕೋಡಿಹಳ್ಳಿ ತಮ್ಮಣ್ಣ, ಕೊಂಡಾಪುರ ಮಂಜುನಾಥ್, ಸಿಂದು ಅಶೋಕ್ ಜಿ.ಎನ್.ಕೆರೆ ಪಚ್ಚಿ, ಶಿವಪ್ರಸಾದ್, ವಕೀಲ ರವಿಕುಮಾರ್ ಪೀಲಾಪುರ ರಾಜಪ್ಪ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
