CHITRADURGA NEWS | 03 APRIL 2026
ಚಿತ್ರದುರ್ಗ: ಸರ್ಕಾರಿ ವಿಜ್ಞಾನ ಕಾಲೇಜು ಹಾಗೂ ತೋಟಗಾರಿಕಾ ಇಲಾಖೆ ಆವರಣದಲ್ಲಿರುವ ಮರಗಳ ಉಳಿವಿಗಾಗಿ ಏ.6 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ವಾದಿ ಡಾ.ಹೆಚ್.ಕೆ.ಎಸ್.ಸ್ವಾಮಿ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 2 ಏಪ್ರಿಲ್ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜ್ಞಾನ ಕಾಲೇಜು ಆವರಣದಲ್ಲಿ ಸುಮಾರು ಇನ್ನೂರು ಗಿಡ-ಮರಗಳನ್ನು ಕಡಿದು ಮಹಿಳಾ ಕಾಲೇಜು ಹಾಗೂ ತೋಟಗಾರಿಕಾ ಇಲಾಖೆ ಆವರಣದಲ್ಲಿರುವ ಎರಡು ಸಾವಿರಕ್ಕೂ ಹೆಚ್ಚು ಮರಗಳನ್ನು ಕಡಿದು ಜಿಲ್ಲಾಧಿಕಾರಿ ಕಚೇರಿ ನಿರ್ಮಿಸಲು ಹೊರಟಿರುವುದು ಯಾವ ಪುರುಷಾರ್ಥಕ್ಕಾಗಿ ಮೊದಲೆ ಬಯಲುಸೀಮೆ ಚಿತ್ರದುರ್ಗದಲ್ಲಿ ಹವಾಮಾನ ವೈಪರೀತ್ಯದಿಂದ ಜನ ಜಾನುವಾರು ಪಕ್ಷಿಗಳು ತತ್ತರಿಸುತ್ತಿವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಇರುವ ಗಿಡ-ಮರಗಳನ್ನು ಉಳಿಸಿಕೊಳ್ಳಬೇಕೆ ವಿನಃ ಕಡಿಯಬಾರದು ಎಂದು ಒತ್ತಾಯಿಸಿದರು.
ಮರಗಳನ್ನು ಕಡಿಯಲು ಹೊರಟಿರುವುದರ ವಿರುದ್ದ ಬೆಂಗಳೂರಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಒರಗಿಕೊಂಡಿದ್ದ ಮರವೊಂದಿದೆ. ವಿದ್ಯಾರ್ಥಿಗಳು ನೀರುಣಿಸಿ ಬೆಳೆಸಿರುವ ಮರಗಳ ಮಾರಣ ಹೋಮವಾಗಲು ನಾವುಗಳು ಬಿಡುವುದಿಲ್ಲ.
ಚಿತ್ರದುರ್ಗದಲ್ಲಿ ಪರಿಸರವಾದಿಗಳಿರುವುದರಿಂದ ಅಲ್ಪಸ್ವಲ್ಪ ಮರಗಳಾದರೂ ಉಳಿದುಕೊಂಡಿವೆ. ಅವುಗಳನ್ನು ಕಡಿಯಬಾರದು ಎಂದರು.
ಇದನ್ನೂ ಓದಿ: ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಶೇ.33 ರಷ್ಟು ಅರಣ್ಯ ಪ್ರದೇಶವಿರಬೇಕು. ಕೇವಲ 22 ಪಸೆಂಟ್‍ನಷ್ಟಿದೆ. ಅಭಿವೃದ್ದಿಯೆಂದರೆ ಕಟ್ಟಡಗಳನ್ನು ಕಟ್ಟುವುದಲ್ಲ. ಜಿಲ್ಲೆಯಲ್ಲಿ ಅಕಾಲಿಕ ಮಳೆಯಿರುವುದರಿಂದ ಜಾಗತಿಕ ತಾಪಮಾನವಿದೆ. ನಾಗರೀಕರ ಹಾಗೂ ಪರಿಸರ ಪ್ರೇಮಿಗಳ ಅಭಿಪ್ರಾಯ ಕೇಳದೆ ಅಧಿಕಾರಿಗಳು ಮರಗಳನ್ನು ಕಡಿಯಲು ಅನುಮತಿ ಕೊಟ್ಟಿರುವುದು ಯಾವ ನ್ಯಾಯ?
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರಶ್ನಿಸುವ ಹಕ್ಕಿದೆ. ಇದೆ ರೀತಿ ಮರ-ಗಿಡಗಳನ್ನು ಕಡಿದರೆ ಮುಂದಿನ ಪೀಳಿಗೆಗೆ ಪರಿಸರವೇ ಇರುವುದಿಲ್ಲ. ಎಲ್ಲವನ್ನು ನಿರ್ನಾಮ ಮಾಡಲು ಹೊರಟಿರುವವರ ವಿರುದ್ದ ಯಾವ ರೀತಿಯ ಹೋರಾಟ ತ್ಯಾಗಕ್ಕೂ ಸಿದ್ದರಿದ್ದೇವೆಂದು ಎಚ್ಚರಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ರಸ್ತೆ ಅಗಲೀಕರಣ ನೆಪದಲ್ಲಿ ಸಾಕಷ್ಟು ಮರಗಳನ್ನು ಕಡಿಯಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿಕೊಂಡು ಚಿತ್ರದುರ್ಗವನ್ನು ಬಯಲುಸೀಮೆಯನ್ನಾಗಿಸಿದ್ದಾರೆ.
ಇದನ್ನೂ ಓದಿ: ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
ತೋಟಗಾರಿಕೆ ಇಲಾಖೆ ಹಾಗೂ ವಿಜ್ಞಾನ ಕಾಲೇಜು ಆವರಣ ವಯೋವೃದ್ದರು, ಮಹಿಳೆಯರು, ಮಕ್ಕಳ ವಾಯುವಿಹಾರಕ್ಕೆ ಹೇಳಿ ಮಾಡಿಸಿದಂತಿದೆ. ಇಂತಹ ಸನ್ನಿವೇಶದಲ್ಲಿ ಇರುವ ಗಿಡ-ಮರಗಳನ್ನು ಕಡಿದು ನಾಶಪಡಿಸಿದರೆ ಪರಿಸರಕ್ಕೆ ಏನು ಕೊಡುಗೆ ಕೊಟ್ಟಂತಾಗುತ್ತದೆಂದು ಪ್ರಶ್ನಿಸಿದರು?
ಜಿಲ್ಲಾ ತೋಟಗಾರಿಕೆ ಇಲಾಖೆ ಸಂಘದ ಖಜಾಂಚಿ ನಾಗರಾಜ್‍ಬೇದ್ರೆ, ಡಾ.ಮಧು, ಮಂಜುನಾಥ್ ಕಳ್ಳಿಹಟ್ಟಿ ಮಾತನಾಡಿದರು. ಪದ್ಮ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
