CHITRADURGA NEWS | 30 NOVEMBER 2025
ಚಿತ್ರದುರ್ಗ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ನಾಳೆ ಬೆಳಿಗ್ಗೆ 11 ಗಂಟೆಗೆ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ತಿಳಿಸಿದ್ದಾರೆ.
ಇದನ್ನೂ ಓದಿ: ಡಿಸೆಂಬರ್ 02 ರಂದು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ರಾಮಪ್ಪ ಜಿಲ್ಲಾ ಪ್ರವಾಸ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅತಿವೃಷ್ಟಿಯಿಂದ ಮಳೆಯಿಂದ ಹಾನಿಯಾದ ರೈತರ ಏಕದಳ, ದ್ವಿದಳ ಹಾಗೂ ತೋಟಗಾರಿಕೆ ಬೆಳೆಗಳಿಗೆ ಮತ್ತು ಎನ್.ಡಿ.ಆರ್.ಎಫ್. ಎಸ್.ಡಿ.ಆರ್.ಎಫ್ ನಿಯಮಕ್ಕೆ ಅನುಸಾರವಾಗಿ ಪರಿಹಾರ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ರಾಜ್ಯ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ನಗರದ ನೀಲಕಂಠೇಶ್ವರ ದೇವಾಲಯದಿಂದ ಒನಕೆ ಓಬವ್ವ ವೃತ್ತದವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.
ಪ್ರತಿಭಟನೆಯಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಶ್ರೀರಾಮುಲು, ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ನೇರ್ಲೆಗುಂಟೆ ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಮುಖಂಡರಾದ ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ್ ಸೇರಿದಂತೆ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
