ಮುಖ್ಯ ಸುದ್ದಿ
Protest: ಸಿದ್ದರಾಮಯ್ಯ ಹಠಾವೋ ದಲಿತ್ ಬಚವೋ | 28ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ
CHITRADURGA NEWS | 24 AUGUST 2024
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಆಗಸ್ಟ್ 28ರಂದು ಸಿದ್ದರಾಮಯ್ಯ ಹಠಾವೋ ದಲಿತ್ ಬಚವೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಮೋಹನ್ ದಾಸರಿ ತಿಳಿಸಿದರು.
ಸುಪ್ರೀಂ ಕೋರ್ಟ್ ಒಳಮೀಸಲಿಗೆ ಸಮ್ಮತಿಸಿದ್ದರೂ ಮುಖ್ಯಮಂತ್ರಿ ಅವರು ಸದಾಶಿವ ಆಯೋಗದ ವರದಿ ಜಾರಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ವಿಧಾನಸಭಾ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದಲಿತರ ಏಳಿಗೆಗಾಗಿ ಶ್ರಮಿಸುವುದಾಗಿ ತಿಳಿಸಿದ್ದರು. ಅದ್ಯಾವುದನ್ನೂ ಮಾಡುತ್ತಿಲ್ಲ. ದಲಿತರ ಶ್ರೇಯೋಭಿವೃದ್ಧಿಗಾಗಿ ಎಸ್‌ಸಿಪಿ–ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡು ಅನ್ಯಾಯ ಎಸಗಿದ್ದಾರೆ ಎಂದರು.
ಕ್ಲಿಕ್ ಮಾಡಿ ಓದಿ: ಬಾಲ್ಯ ವಿವಾಹ ಪ್ರಕರಣ | ಪೊಲೀಸ್ ವಶಕ್ಕೆ ವರ
ಸಂವಿಧಾನ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಗಿಂತ ದಲಿತ ಸಮುದಾಯದ ಹಲವು ಸಂಘಟನೆಗಳ ಪಾತ್ರ ಬಹಳ ದೊಡ್ಡದಿದೆ. ಹೀಗಿದ್ದರೂ ಸಮುದಾಯಕ್ಕೆ ಅನ್ಯಾಯ ಮಾಡುತ್ತಿರುವುದು ಬೇಸರದ ಸಂಗತಿ ಎಂದು ತಿಳಿಸಿದರು.
ಮುಖಂಡರಾದ ಪಿ.ಎಂ.ತಿಪ್ಪೇಸ್ವಾಮಿ, ದಾದಾಪೀರ್, ಕಣಮೇಶ್, ರಮೇಶ್, ಮಂಜುನಾಥ್ ಇದ್ದರು.