Connect with us

    ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

    ಮುಖ್ಯ ಸುದ್ದಿ

    ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 14 MARCH 2025

    ಚಿತ್ರದುರ್ಗ: ನಗರದ ಅಗಸನಹಳ್ಳಿ ಬಡಾವಣೆಯ ಸಾಧಿಕ್ ಎಂಬುವವನು 3ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

    Also Read: 3ನೇ ತರಗತಿ ಬಾಲಕಿ ಮೇಲೆ 56 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

    ಸಂಜೆ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್, ಐಸ್‍ಕ್ರೀಂ ಆಸೆ ತೋರಿಸಿ ಗುಡ್ಡದ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಸಂಬಂಧ ಎಫ್.ಐ.ಆರ್.ದಾಖಲಾಗಿದ್ದರೂ ಇದುವರೆವಿಗೂ ಅತ್ಯಾಚಾರಿಯನ್ನು ಪೊಲೀಸರು ಬಂಧಿಸಿಲ್ಲ.

    ಅತ್ಯಾಚಾರ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದರು ರಾಜ್ಯ ಸರ್ಕಾರವಾಗಲಿ, ಪೊಲೀಸ್ ಇಲಾಖೆಯಾಗಲಿ ಎಚ್ಚೆತ್ತುಕೊಳ್ಳುತ್ತಿಲ್ಲ. ಪೋಕ್ಸೋ ಕಾಯಿದೆಯಡಿ ಕಠಿಣ ಶಿಕ್ಷೆ ವಿಧಿಸುವಂತೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

    Also Read: ನಾಯಕನಹಟ್ಟಿ ಜಾತ್ರೆಗೆ ಕ್ಷಣಗಣನೆ | ಮಾ.16 ರಂದು ದೊಡ್ಡ ರಥೋತ್ಸವ

    ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ನಿಸಾರ್ ಅಹಮದ್, ಮುಜಾಹಿದ್, ನಾಗೇಶ್, ಅಖಿಲೇಶ್, ಶಶಿ, ಯರ್ರಿಸ್ವಾಮಿ, ವಿಜಯ್‍ಬಾಬು, ಮಹಮದ್ ರಫಿ, ಅವಿನಾಶ್ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top