By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
    6 hours ago
    SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ
    SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ 
    6 hours ago
    ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
    ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ | ಶೇ.98 ಮತದಾನ ಮಾಡಿದ ವಿದ್ಯಾರ್ಥಿಗಳು 
    6 hours ago
    ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದ ಮೇಲಿನ ಶೇ.50 ರಿಯಾಯಿತಿ' ಕುರಿತು ಸಾರ್ವಜನಿಕ ಜಾಗೃತಿ
    ಸಂಚಾರಿ ನಿಯಮ ಪಾಲಿಸಿ, ಜೀವ ರಕ್ಷಿಸಿಕೊಳ್ಳಿ | ನ್ಯಾ.ಸುದೀನ್ ಕುಮಾರ್
    6 hours ago
    ಮುರುಘಾ ಮಠ
    ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 week ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    2 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    kitchen
    ಅಡುಗೆಮನೆಯಲ್ಲಿ ಎಂದಿಗೂ ಈ 5 ವಸ್ತುಗಳನ್ನು ಇಡಬಾರದಂತೆ, ಇವು ಆರೋಗ್ಯಕ್ಕೆ ಕೆಟ್ಟದಂತೆ
    7 hours ago
    Strawberry-honey
    ಹೊಳೆಯುವ ಮುಖಕ್ಕಾಗಿ ಸ್ಟ್ರಾಬೆರಿ -ಜೇನುತುಪ್ಪದ ಫೇಸ್ ಮಾಸ್ಕ್ 
    8 hours ago
    What should pregnant women eat on an empty stomach
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    1 day ago
    beauty secret hidden in ghee
    ತುಪ್ಪದಲ್ಲಿ ಅಡಗಿರುವ ಸೌಂದರ್ಯ ರಹಸ್ಯವೇನು ಗೊತ್ತಾ?
    1 day ago
    sink get blocked
    ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
    2 days ago
Reading: ವಿದ್ಯಾರ್ಥಿನಿ ವರ್ಷಿತಾಳ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ | ಕುಟುಂಬಕ್ಕೆ 1 ಕೋಟಿ ಪರಿಹಾರಕ್ಕೆ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿದ್ಯಾರ್ಥಿನಿ ವರ್ಷಿತಾಳ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ | ಕುಟುಂಬಕ್ಕೆ 1 ಕೋಟಿ ಪರಿಹಾರಕ್ಕೆ ಒತ್ತಾಯ

News Desk Chitradurga News
Last updated: 22 August 2025 19:54
News Desk Chitradurga News
10 months ago
Share
ವಿದ್ಯಾರ್ಥಿನಿ ವರ್ಷಿತಾಳ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
SHARE

CHITRADURGA NEWS | 22 AUGUST 2025

ಚಿತ್ರದುರ್ಗ: ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರು, ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: ಮದುವೆಗೆ ಒತ್ತಾಯಿಸಿದ್ದಕ್ಕೆ ಕೊಂದನಾ ಪಾಪಿ | SP ರಂಜಿತ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ?

ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿ ಕೋವೇರಹಟ್ಟಿಯ ಹತ್ತೊಂಬತ್ತು ವರ್ಷದ ವಿದ್ಯಾರ್ಥಿನಿ ವರ್ಷಿತಾಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿದೆ. ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ವರ್ಷಿತಾ ಕುಟುಂಬಕ್ಕೆ ಪರಿಹಾರ ನೀಡಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕೆಂದು ಒತ್ತಾಯಿಸಲಾಯಿತು.

ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷೆ ಹೆಚ್.ಭಾರತಿ, ಕೆ.ಬಿ.ಮಲ್ಲಮ್ಮ, ಉಷಾರಾಣಿ, ಲಕ್ಷ್ಮಮ್ಮ, ಸೋಮಣ್ಣ, ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಶಂಕ್ರಮ್ಮ, ನೇತ್ರ, ವೆಂಕಟೇಶ್ ಸಾಣಿಕೆರೆ, ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ, ಅನಂತಮೂರ್ತಿನಾಯ್ಕ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ

ದ್ವಿತೀಯ ಬಿ.ಎ.ವಿದ್ಯಾರ್ಥಿನಿ ವರ್ಷಿತಾಳನ್ನು ಬರ್ಬರವಾಗಿ ಹತ್ಯೆಗೈದಿರುವವರಿಗೆ ಕ್ರೂರ ಶಿಕ್ಷೆ ವಿಧಿಸುವಂತೆ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿಯ ಕೊಲೆ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆ

ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಸುಟ್ಟುಹಾಕಿರುವುದು ಇಡೀ ನಾಗರೀಕ ಸಮಾಜ ತಲೆತಗ್ಗಿಸುವಂತದ್ದು, ಈ ಕೃತ್ಯದ ಹಿಂದೆ ಯಾರ್ಯಾರ ಕೈವಾಡವಿದೆ ಎನ್ನುವುದನ್ನು ಸಮಗ್ರ ತನಿಖೆ ಮೂಲಕ ಬಯಲಿಗೆಳೆಯುವ ಕೆಲಸವನ್ನು ಪೊಲೀಸರು ಮಾಡಬೇಕಿದೆ. 

ಹತ್ಯೆಗೀಡಾಗಿರುವ ವರ್ಷಿತಾಳ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡುವ ಹೊಣೆಗಾರಿಕೆ ಸರ್ಕಾರದ ಮೇಲಿದೆ. ನಿರ್ಲಕ್ಷೆ ಮಾಡಬಾರದು. ಚಿತ್ರದುರ್ಗದಲ್ಲಿ ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದೆಂದರೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್‍ನಾಯ್ಕ, ಉಪಾಧ್ಯಕ್ಷ ಮಂಜಣ್ಣ, ರೈತ ಸಂಘದ ಅಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿ ಓಬಣ್ಣ, ತಾಲ್ಲೂಕು ಅಧ್ಯಕ್ಷ ಸಚಿನ್, ಯಶವಂತ್, ನಾಗರಾಜ್, ರಘುನಾಯ್ಕ, ಸತೀಶ್, ಗಿರೀಶ್, ಎಸ್.ನಾಗರಾಜ, ರವಿಶಂಕರ್, ಶಿವಶಂಕರ್, ಪ್ರಕಾಶ್, ನಿಂಗಪ್ಪ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಹುಲ್‍ಗಾಂಧಿ ವಿಚಾರ ವೇದಿಕೆ, ಜಿಲ್ಲಾ ಯುವ ಕಾಂಗ್ರೆಸ್, ಸಂವಿಧಾನ ರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಕಾಮುಕರಿಂದ ಹತ್ಯೆಗೀಡಾಗಿರುವ ವಿದ್ಯಾರ್ಥಿನಿ ವರ್ಷಿತಾಳ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂ.ಗಳ ಪರಿಹಾರ ನೀಡಿ ಯಾರಿಗಾದರೂ ಒಬ್ಬರಿಗೆ ಸರ್ಕಾರಿ ನೌಕರಿಯನ್ನು ಕೊಡುವಂತೆ ರಾಹುಲ್‍ಗಾಂಧಿ ವಿಚಾರ ವೇದಿಕೆ, ಜಿಲ್ಲಾ ಯುವ ಕಾಂಗ್ರೆಸ್, ಸಂವಿಧಾನ ರಕ್ಷಣಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಇದಂನ್ನಿ ಓದಿ: ಒಳಮೀಸಲಾತಿ ವಿಚಾರ | ಮಾದಾರ ಚನ್ನಯ್ಯ ಶ್ರೀ ಮಹತ್ವದ ಸುದ್ದಿಗೋಷ್ಠಿ

ದಲಿತ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಸುಟ್ಟುಹಾಕಿರುವುದರಿಂದ ಶಾಲಾ-ಕಾಲೇಜುಗಳಿಗೆ ಹೋಗಲು ಹೆಣ್ಣುಮಕ್ಕಳು ಭಯಪಡುವಂತಾಗಿದೆ. ಹಾಗಾಗಿ ಹತ್ಯೆಯಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಸಮರ್ಥರಾಯ್, ಎನ್.ಎಸ್.ಯು.ಐ. ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ್‍ಗೋಡೆಮನೆ, ಮಹಮದ್ ಆಜಾಂ, ಖಲೀಲ್‍ವುರ್, ರೆಹಮಾನ್, ವಸೀಂ, ಅರ್ಜುನ್, ರೋಹನ್, ಸೈಯದ್‍ಸಾಧಿಕ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಕರುನಾಡ ವಿಜಯಸೇನೆಯಿಂದ ಪ್ರತಿಭಟನೆ

ಕೋವೇರಹಟ್ಟಿಯ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನೊಂದ ಕುಟುಂಬಕ್ಕೆ ಒಂದು ಕೋಟಿ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: ವಾಹನ ಸವಾರರಿಗೆ GOOD NEWS | ದಂಡದ ಮೊತ್ತದಲ್ಲಿ ಶೇ.50 ಡಿಸ್ಕೌಂಟ್‌ | ಯಾರಿಗೆಲ್ಲ ಅನ್ವಯ, ಇಲ್ಲಿದೆ ಅದರ ಡೀಟೇಲ್ಸ್

ಹಾಸ್ಟೆಲ್‍ನಲ್ಲಿದ್ದ ವರ್ಷಿತಾಳನ್ನು ಹೊರಗೆ ಕರೆದುಕೊಂಡು ಹೋಗಿ ಗೋನೂರು ಸಮೀಪ ಅತ್ಯಾಚಾರವೆಸಗಿ ಸುಟ್ಟು ಹಾಕಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿದೆ. ಎಲ್ಲಾ ಹಾಸ್ಟೆಲ್‍ಗಳ ಸುತ್ತಮುತ್ತ ಸಿ.ಸಿ.ಕ್ಯಾಮರಾ ಇಲ್ಲದಿರುವುದು ಇಂತಹ ಅನಾಹುತಗಳಿಗೆ ಕಾರಣ. ಈ ಹಿಂದೆ ಇದ್ದ ಓಬವ್ವ ಪೊಲೀಸ್ ಪಡೆಯನ್ನು ಮರು ಸ್ಥಾಪಿಸಿ ಮಹಿಳಾ ಡಿ.ವೈ.ಎಸ್ಪಿ. ತಂಡ ರಚಿಸಬೇಕು. 

ನಗರ ಸೇರಿದಂತೆ ಸುತ್ತಮುತ್ತ ಐದಾರು ಕಿ.ಮೀ. ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲಿ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಬೇಕು. ಭದ್ರತೆ ಇಲ್ಲದಿರುವುದಕ್ಕೆ ಇಂತಹ ಅನೈತಿಕ, ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಮಲಮ್ಮ, ರತ್ನಮ್ಮ, ಅವಿನಾಶ್, ಮುಜಾಯಿದ್, ಜಗದೀಶ್, ಅಖಿಲೇಶ್, ವಿಜಯ್‍ಬಾಬು, ಸುಶೀಲ, ಪ್ರದೀಪ್, ತಿಪ್ಪೇಸ್ವಾಮಿ, ಯಶವಂತ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆಯಿಂದ ಪ್ರತಿಭಟನೆ

ಮಾದಿಗ ಸಮುದಾಯದ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಸುಟ್ಟು ಹಾಕಿರುವ ದುಷ್ಟಶಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಲಾಯಿತು.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮನೆ ಮೇಲೆ ED ಅಧಿಕಾರಿಗಳ ದಾಳಿ

ವಿದ್ಯಾರ್ಥಿನಿ ವರ್ಷಿತಾಳ ಹತ್ಯೆಗೆ ಸಂಬಂಧಿಸಿದಂತೆ ಚೇತನ್ ಎಂಬುವನನ್ನು ಬಂಧಿಸಿದ್ದು, ಇದರ ಹಿಂದೆ ಯಾರ್ಯಾರ ಕೈವಾಡವಿದೆ ಎನ್ನುವುದನ್ನು ಸಂಪೂರ್ಣ ತನಿಖೆ ನಡೆಸಿ ಕಾಮುಕರನ್ನು ಬಯಲಿಗೆಳೆಯಬೇಕು.

ವರ್ಷಿತಾಳ ಕುಟುಂಬಕ್ಕೆ ಐದು ಎಕರೆ ಜಮೀನು ಮಂಜೂರು ಮಾಡಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆ ಸಮಿತಿ ಅಧ್ಯಕ್ಷ ಬಿ.ಓ.ಗಂಗಾಧರಪ್ಪ ಮನವಿ ಮಾಡಿದರು.

ಉಪಾಧ್ಯಕ್ಷ ಬಿ.ರಾಜಪ್ಪ, ಜೆ.ಪ್ರಸನ್ನ, ಕರಿಬಸವಯ್ಯ, ರುದ್ರಮುನಿ, ನ್ಯಾಯವಾದಿ ವೆಂಕಟೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMurderprotestStudentVarious organizationsಕೊಲೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆವಿದ್ಯಾರ್ಥಿನಿವಿವಿಧ ಸಂಘಟನೆ
Share This Article
Facebook Email Print
Previous Article Kannada literary appreciation camp for young journalists ಪತ್ರಕರ್ತ ವೃತ್ತಿಯಷ್ಟು ತೀವ್ರ ಬದಲಾವಣೆ ಮತ್ತೊಂದಾಗಿಲ್ಲ | ದಿನೇಶ್ ಅಮಿನ್ ಮಟ್ಟು
Next Article ಚಿತ್ರದುರ್ಗ ನಗರಸಭೆ ನಗರಸಭೆಯಿಂದ ಗಣೇಶ ವಿಸರ್ಜಿಸಲು ನೀರಿನ ತೊಟ್ಟಿ ವ್ಯವಸ್ಥೆ | ಸ್ಥಳಗಳ ವಿವರ ಇಲ್ಲಿದೆ..
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ
SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ 
ಮುಖ್ಯ ಸುದ್ದಿ
ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ | ಶೇ.98 ಮತದಾನ ಮಾಡಿದ ವಿದ್ಯಾರ್ಥಿಗಳು 
ಮುಖ್ಯ ಸುದ್ದಿ
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದ ಮೇಲಿನ ಶೇ.50 ರಿಯಾಯಿತಿ' ಕುರಿತು ಸಾರ್ವಜನಿಕ ಜಾಗೃತಿ
ಸಂಚಾರಿ ನಿಯಮ ಪಾಲಿಸಿ, ಜೀವ ರಕ್ಷಿಸಿಕೊಳ್ಳಿ | ನ್ಯಾ.ಸುದೀನ್ ಕುಮಾರ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up