
CHITRADURGA NEWS | 30 SEPTEMBER 2025
ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಭಾಗದ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಯಂ ಹಾಗೂ ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ವೈದ್ಯಾಧಿಕಾರಿಗಳು ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಜಿ.ಪಂ.ಸಿಇಓ ಡಾ.ಆಕಾಶ್ ಸೂಚಿಸಿದ್ದಾರೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಬೆಳಿಗ್ಗೆ 9 ರಿಂದ ಸಂಜೆ 4:30 ರವರೆಗೆ ಆಸ್ಪತ್ರೆಯಲ್ಲಿದ್ದು ಹೊರ ರೋಗಿಗಳ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕು. ಕಡ್ಡಾಯವಾಗಿ ಆರೋಗ್ಯ ಸುರಕ್ಷಣಾಧಿಕಾರಿಗಳು, ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರ ಪ್ರಗತಿ ಪರಿಶೀಲನೆಯನ್ನು ಮಧ್ಯಾಹ್ನ ನಂತರ ನೆಡಸಬೇಕು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 30 | ಹತ್ತಿ ರೇಟ್ ಎಷ್ಟಿದೆ?
ಖಾಯಂ ವೈದ್ಯಾಧಿಕಾರಿಗಳು ಮಾತ್ರ ಕರ್ತವ್ಯ ನಿರ್ವಹಿಸುತ್ತಿರುವ ಆಸ್ಪತ್ರೆ ಹಾಗೂ ಪ್ರಭಾರಿ ಆಸ್ಪತ್ರೆ ವ್ಯಾಪ್ತಿಯಲ್ಲಿನ ಶಾಲಾ, ಅಂಗನವಾಡಿ ಹಾಗೂ ಇತರ ನಿಯಮಿತ ಕ್ಷೇತ್ರಭೇಟಿ ಕಾರ್ಯಗಳನ್ನು ಕೈಗೊಳ್ಳಬೇಕು. ಗುತ್ತಿಗೆ ವೈದ್ಯರು ಡಿ.ಹೆಚ್.ಓ ಅಥವಾ ಟಿ.ಹೆಚ್.ಓ ಅವರ ನಿರ್ದೇಶನದ ಮೇರೆಗೆ ತುರ್ತು ಸಂದರ್ಭದಲ್ಲಿ ಮಾತ್ರ ಕ್ಷೇತ್ರ ಭೇಟಿ ಮಾಡಬೇಕು.
ತುರ್ತು ಸಂದರ್ಭ ಹೊರತು ಪಡಿಸಿ ವೈದ್ಯಾಧಿಕಾರಿಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪರಿಶೀಲನೆಗಳನ್ನು ಮಧ್ಯಾಹ್ನದ ನಂತರ ವಿಡಿಯೋ ಸಂದರ್ಶನದ ಮೂಲವೇ ನಡೆಸಬೇಕು. ವೈದ್ಯರನ್ನು ಭೌತಿಕವಾಗಿ ಕರೆದು ಸಭೆ ನಡೆಸುವ ಅವಶ್ಯಕತೆ ಇಲ್ಲ. ಚಾಚು ತಪ್ಪದೇ ನೀಡಿರುವ ಸೂಚನೆಗಳನ್ನು ಪಾಲಿಸಬೇಕು ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿ.ಪಂ.ಸಿಇಓ ಡಾ.ಆಕಾಶ್ ಎಚ್ಚರಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
