CHITRADURGA NEWS | 20 JANUARY 2026
ಚಿತ್ರದುರ್ಗ: ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ, ಶೌಚಾಲಯಗಳ ಸ್ಥಿತಿಗತಿ ಶೋಚನೀಯವಾಗಿವೆ ಎಂದು ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಅಸಮಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಶೇ.80 ಕ್ಕೂ ಹೆಚ್ಚು ಹೆರಿಗೆ ಸಿಸೇರಿಯನ್ | ಸಚಿವರು, ಶಾಸಕರ ಕಳವಳ
ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕಾಲಕಾಲಕ್ಕೆ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಶನಿವಾರ, ಭಾನುವಾರ ರಜೆ ಸಂದರ್ಭದಲ್ಲಿ ಹಾಸ್ಟೆಲ್‍ನಿಂದ ತೆರಳುವ ಮಕ್ಕಳ ಬಗ್ಗೆ ಸೂಕ್ತ ನಿಗಾ ಇಡುವುದು ಅಗತ್ಯವಾಗಿದೆ ಎಂದರು.
ಹಾಸ್ಟೆಲ್‍ಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಿದ್ದು, ಇದಕ್ಕೆ ಅನುಗುಣವಾಗಿಯೇ ಆಹಾರ ಮತ್ತಿತರ ಬಿಲ್‍ಗಳು ಪಾವತಿಯಾಗಬೇಕು. ಕಳೆದ ವರ್ಷ ಹಾಸ್ಟೆಲ್‍ನಲ್ಲಿನ ಮಕ್ಕಳ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಫಲಿತಾಂಶಗಳು ತೀವ್ರ ಕಡಿಮೆ ಪ್ರಮಾಣದ್ದಾಗಿದ್ದು, ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಆಗಬೇಕು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಜಲಜೀವನ ಮಿಷನ್ | ಚಿತ್ರದುರ್ಗ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಕಳಪೆ ಕಾಮಗಾರಿ
ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಈ ವರ್ಷ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಲಾಗುತ್ತಿದೆ. ಹೀಗಾಗಿ ಈ ವರ್ಷ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ಹಾಸ್ಟೆಲ್‍ಗಳಲ್ಲಿ ಮೂಲಭೂತ ಸೌಕರ್ಯ ಹೆಚ್ಚಿನ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಪಂ. ಸಿಇಒ ಆಕಾಶ್ ಹೇಳಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
