By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    11 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    12 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    12 hours ago
    ಅರ್ಜಿ ಅಹ್ವಾನ
    ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
    21 hours ago
    Rudset Institute
    ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    1 hour ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    17 minutes ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    23 hours ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    2 days ago
Reading: ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ

News Desk Chitradurga News
Last updated: 17 July 2026 18:47
News Desk Chitradurga News
2 months ago
Share
ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆ
ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆ
SHARE

CHITRADURGA NEWS | 17 JULY 2026

ಚಿತ್ರದುರ್ಗ: ಜಿಲ್ಲೆಯ ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ, ರೈತರ ಹಿತ ಕಾಪಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ನೇರ ರೈಲ್ವೇ ಮಾರ್ಗ ಮತ್ತು ಚಿಕ್ಕಜಾಜೂರು-ಬಳ್ಳಾರಿ ರೈಲ್ವೇ ಡಬ್ಲಿಂಗ್ ಯೋಜನೆಗೆ ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆ ತಡವಾದಷ್ಟು ರೈಲ್ವೇ ಯೋಜನೆಗಳ ವೆಚ್ಚವೂ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿ ಸರ್ಕಾರ ನಷ್ಟ ಉಂಟಾಗುತ್ತದೆ. ಜಿಲ್ಲೆಯ ರೈತರು ರೈಲ್ವೇ ಅಭಿವೃದ್ಧಿ ಭೂಮಿ ನೀಡಲು ಸಿದ್ದರಿದ್ದಾರೆ, ಆದರೆ ನೀಡುವ ಭೂಮಿಗೆ ಸೂಕ್ತ ಬೆಲೆ ಅಪೇಕ್ಷಿಸುತ್ತಿದ್ದಾರೆ. 

ಹೊಳಲ್ಕೆರೆ ಭಾಗ ಅರೆ ಮಲೆನಾಡು ಪ್ರದೇಶವಾಗಿದ್ದು, ರೈತರು ಜಮೀನುಗಳಲ್ಲಿ ಅಡಿಕೆ, ಮಾವಿನ ತೋಟಗಳನ್ನು ಮಾಡಿದ್ದಾರೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಬೆಳೆಗಳಿಗೆ ಸೂಕ್ತ ಪರಿಹಾರ ದೊರಕುವಂತೆ ತಮ್ಮ ವರದಿ ನೀಡಬೇಕು. ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.

ಸರ್ವೇ ಕಾರ್ಯಕ್ಕೆ ಸಹಕರಿಸಲು ರೈತರಲ್ಲಿ ಮನವಿ:

ಸಭೆಯಲ್ಲಿ ರೈತರ ಮುಖಂಡರಿಗೆ ಭೂಸ್ವಾಧೀನ ಪಡಿಸಿಕೊಳ್ಳೂವ ಭೂಮಿಗೆ ಸೂಕ್ತ ಬೆಲೆ ನೀಡುವ ಭರವಸೆ ನೀಡಿದ ಸಂಸದ ಗೋವಿಂದ ಎಂ ಕಾರಜೋಳ, ಭೂಸ್ವಾಧೀನ ಹಾಗೂ ರೈಲೈ ಅಧಿಕಾರಿಗಳ ಸರ್ವೇ ಕಾರ್ಯಕ್ಕೆ ಸಹಕರಿಸುವಂತೆ ಕೋರಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?

ಭೂಸ್ವಾಧೀನ, ರೈಲ್ವೇ, ಕಂದಾಯ, ತೋಟಗಾರಿಕೆ, ಕೃಷಿ, ಅರಣ್ಯ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವುದರ ಜೊತೆಗೆ ಭೂಸ್ವಾಧೀನ ಸಂಬAಧಿಸಿದ ವ್ಯಾಜ್ಯಗಳನ್ನು ಶೀಘ್ರವಾಗಿ ಪರಿಹರಿಸಬೇಕು. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ಯಾವುದೇ ಆತಂಕ ಬೇಡ, ಸಬ್ ರಿಜಿಸ್ಟ್ರಾರ್ ಕಚೇರಿಯ ಮಾರುಕಟ್ಟೆ ಮೌಲ್ಯದ ದರ ಆಧರಿಸಿ ಮೂಲ ಬೆಲೆ ನಿಗದಿಪಡಿಸಲಾಗುತ್ತದೆ. ಇದರ ಆಧಾರ ಮೇಲೆ ಭೂಮಿಗೆ ಹೆಚ್ಚಿನ ಬೆಲೆ ದೊರಕುತ್ತದೆ. ಇದರೊಂದಿಗೆ ಜಮೀನಿನಲ್ಲಿ ಇರುವ ಬೆಳೆ, ತೋಟಗಾರಿಕೆ ಬೆಳೆಗಳು, ಪಶು ಸಂಗೋಪನೆಗಾಗಿ ನಿರ್ಮಿಸಿರುವ ಕಟ್ಟಡ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ನಿರ್ಮಿಸಿದ ಇತರೆ ನಿರ್ಮಾಣಗಳಿಗೂ ಪರಿಹಾರ ದೊರಕಲಿದೆ. ನಿಯಮಗಳ ಅಡಿ ರೈತರಿಗೆ ದೊರಕಬೇಕಾಗದ ಗರಿಷ್ಠ ಮಟ್ಟದ ಪರಿಹಾರಗಳನ್ನು ದೊರಕಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆಗೆ ಒಟ್ಟು 1405 ಎಕರೆ ಭೂಮಿ ಅವಶ್ಯಕತೆ ಇದ್ದು, ಈ ಪೈಕಿ 1211 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ರೈಲ್ವೇ ಇಲಾಖೆ ಜಮೀನು ಹಸ್ತಾಂತರಿಸಲಾಗಿದೆ. ನೇರ ರೈಲ್ವೇ ಕಾಮಗಾರಿಯೂ ಪ್ರಗತಿಯಲ್ಲಿದೆ.

ಇದನ್ನೂ ಓದಿ: SJM ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯಕ್ಕೆ BA, B.Com ನಲ್ಲಿ ಉತ್ತಮ ಫಲಿತಾಂಶ 

ರೈಲ್ವೇ ಮೇಲ್ಸೇತುವೆ, ಕೆಳಸೇತುವೆ, ವಿದ್ಯುತ್ ಉಪ ಕೇಂದ್ರ ಹಾಗೂ ಜಾಲಗಳ ನಿರ್ಮಾಣಕ್ಕೆ ಒಟ್ಟು 194 ಎಕರೆ ಭೂ ಅವಶ್ಯಕತೆ ಇದ್ದು, ಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಪೈಕಿ ಚಿತ್ರದುರ್ಗ ಹಾಗೂ ಭರಮಸಾಗರ ಮಧ್ಯ 56 ಎಕರೆ ಭೂ ಸ್ವಾಧೀನಕ್ಕೆ ಜಂಟಿ ಅಳತೆ ಸಮೀಕ್ಷೆ (ಜೆ.ಎಂ.ಸಿ)ಯನ್ನು ಸಹ ಪೂರ್ಣಗೊಳಿಸಲಾಗಿದೆ. 

ಪಾಲವ್ವನಹಳ್ಳಿ-ಚಿತ್ರದುರ್ಗದ ಮದ್ಯ 28-25 ಎಕರೆ ಭೂಮಿ ಅವಶ್ಯಕತೆ ಇದೆ. ನಕ್ಷೆ ಹಾಗೂ ಭೂ ದಾಖಲೆಗಳ ತಯಾರಿಕೆ 15 ದಿನಗಳ ಅವಶ್ಯಕತೆಯಿದೆ. ಹಿರಿಯೂರು ತವರಕೆರೆ ಮಧ್ಯೆ 31 ಎಕರೆ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. 60 ದಿನ ನೋಟಿಸ್ ಅವಧಿ ಪೂರ್ಣಗೊಂಡ ನಂತರ ಭೂಮಿ ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುವುದು. ಇದೇ ಮಾದರಿಯಲ್ಲಿ ಚಿತ್ರದುರ್ಗ ಹಿರಿಯೂರು ಮಧ್ಯೆ 79 ಎಕೆರೆ ಭೂಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ.

ಚಿಕ್ಕಚಾಜೂರು-ಬಳ್ಳಾರಿ ನಡುವಿನ ರೈಲ್ವೇ ಮಾರ್ಗ ಡಬ್ಲಿಂಗ್ ಯೋಜನೆಗೆ ಹೊಳಲ್ಕೆರೆ ತಾಲ್ಲೂಕಿನಲ್ಲಿ 86 ಎಕರೆ 01 ಗುಂಟೆ ಚಿತ್ರದುರ್ಗ ತಾಲ್ಲೂಕಿನಲ್ಲಿ 72 ಎಕರೆ 12 ಗುಂಟೆ, ಚಳ್ಳಕೆರೆ ತಾಲ್ಲೂಕಿನಲ್ಲಿ 120 ಎಕರೆ 38 ಗುಂಟೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 34 ಎಕರೆ 11 ಗುಂಟೆ ಭೂಮಿ ಅಗತ್ಯತೆಯನ್ನು ರೈಲ್ವೇ ಇಲಾಖೆಯಿಂದ ನೀಡಲಾಗಿದೆ. ಈಗಾಗಲೇ ಹೊಳಲ್ಕೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ 86 ಎಕರೆ ಭೂ ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರದಲ್ಲೇ ಉಳಿದ ತಾಲ್ಲೂಕುಗಳಿಗೂ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವುದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸಭೆಯಲ್ಲಿ ಮಾಹಿತಿ ನೀಡಿದರು.

ಆಶ್ರಯ ನಿವೇಶನ : ಲೇ ಔಟ್ ನಿರ್ಮಿಸಲು ಸೂಚನೆ

ಇದೇ ಸಂದರ್ಭದಲ್ಲಿ ಆಶ್ರಯ ಸಮಿತಿ ಸಭೆಯ ನಡೆಸಿದ ಸಂಸದ ಗೋವಿಂದ ಎಂ ಕಾರಜೋಳ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಆಶ್ರಯ ನಿವೇಶನ ಹಂಚಿಕೆಗಾಗಿ 1087 ಎಕರೆ ಜಾಗ ಗುರುತಿಸಿ ಮೀಸಲು ಇರಿಸಲಾಗಿದೆ. ಶೀಘ್ರವೇ ಈ ಜಾಗದಲ್ಲಿ ಜಿಲ್ಲಾ ಪಂಚಾಯಿತಿಯಿಂದ ಲೇ ಔಟ್ ನಿರ್ಮಿಸಬೇಕು. ನಗರ ಪ್ರದೇಶದಲ್ಲಿ ಸ್ಲಂಬೋರ್ಡ್ ವತಿಯಿಂದ ನಿರ್ಮಿಸಿದ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ | ಹೆಚ್ಚು ನೀರು ಕೇಳುವ ಬೆಳೆ ಹಾಕಬೇಡಿ | ಡಿಸಿ 

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಸ್.ಜೆ.ಕಾಂತರಾಜು, ಜಿ.ಪಂ.ಸಿಪಿಓ ಗಾಯತ್ರಿ, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ರೈಲ್ವೇ ಇಂಜಿನಿಯರ್‌ಗಳಾದ ಮುನಿಕೃಷ್ಣ, ಹರೀಶ್, ರಜತ್ ಸೇರಿದಂತೆ ಮುತ್ತಿರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFarmersGovinda KarajolLandRailway Developmentಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಭೂಮಿರೈತರುರೈಲ್ವೆ ಅಭಿವೃದ್ಧಿ
Share This Article
Facebook Email Print
Previous Article ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್
Next Article ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

Dry fruit
ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
Dina Bhavishya
ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
ಮುಖ್ಯ ಸುದ್ದಿ
ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up