CHITRADURGA NEWS | 20 JANUARY 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಒತ್ತಡ ಹೆಚ್ಚಾಗಿದೆ. ಹೊಸ ಬಸ್ ನಿಲ್ದಾಣಕ್ಕೆ ಅನುದಾನ ಬಿಡುಗಡೆಯಾದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೋವಿಡ್ ಸಂಕಟದಲ್ಲೇ ನಡೆಯಿತೇ ಹಗರಣ | ಮಾನವೀಯತೆ ಸತ್ತೋದ ವರದಿ ಬಹಿರಂಗ
ಈ ಹಿಂದೆ ನಾನು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷನಾಗಿದ್ದಾಗ ದಾವಣಗೆರೆಯಲ್ಲಿ ೧೨೦ ಕೋಟಿ ವೆಚ್ಚದ ಬಸ್ ನಿಲ್ದಾಣಕ್ಕೆ ಅನುದಾನ ನೀಡಿದ್ದೇನೆ. ಉಡುಪಿಯಲ್ಲಿ ೫೦ ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣವಾಗಿದೆ.
ಚಿತ್ರದುರ್ಗಕ್ಕೂ ೪೪ ಕೋಟಿ ರೂ. ನೀಡಿದ್ದೆ. ಆದರೆ, ಮುಂದೆ ನಮ್ಮ ಸರ್ಕಾರ ಬರದೆ ವಿಳಂಬವಾಗಿದೆ ಎಂದರು.
ಇದಕ್ಕೆ ದನಿಗೂಡಿಸಿದ ಎಂಎಲ್ಸಿ ಕೆ.ಎಸ್.ನವೀನ್, ಸರ್ಕಾರ ಯಾವ್ಯಾವುದೋ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ. ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಅನುದಾನ ಬಿಡುಗಡೆ ಮಾಡಲು ಯಾಕೆ ಮೀನಾಮೇಷ ಎಂದು ಪ್ರಶ್ನಿಸಿದರು.
ಈ ವೇಳೆ ಕೆಲ ಕಾಲ ಸಚಿವರು ಹಾಗೂ ಬಿಜೆಪಿ ಶಾಸಕರ ನಡುವೆ ಸಣ್ಣ ಮಾತು-ಕತೆಯೂ ನಡೆಯಿತು.
ಇದನ್ನೂ ಓದಿ: ಜಲಜೀವನ ಮಿಷನ್ | ಚಿತ್ರದುರ್ಗ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಕಳಪೆ ಕಾಮಗಾರಿ
ಸಭೆಯಲ್ಲಿ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಹೊಳಲ್ಕೆರೆ ಶಾಸಕ ಡಾ. ಬಿ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಡಿ.ಟಿ. ಶ್ರೀನಿವಾಸ್, ಕೆ.ಎಸ್. ನವೀನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಜಿ.ಪಂ. ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಕೆಡಿಪಿ ನಾಮನಿರ್ದೇಶಿತ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

