CHITRADURGA NEWS | 26 AUGUST 2026
ಚಿತ್ರದುರ್ಗ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ಅಲೆಮಾರಿ ಹಾಗೂ ಅರೆಅಲೆಮಾರಿ ಸಮುದಾಯದವರಿಗೆ ನಿವೇಶನ, ಮನೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಸುಡುಗಾಡು ಸಿದ್ದರ ಸಂಘದ ಅಧ್ಯಕ್ಷ ಸಚಿನ್ ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳು ಸಮೀಪಿಸುತ್ತಿದ್ದರೂ ಅಲೆಮಾರಿ ಸಮುದಾಯಕ್ಕೆ ಇನ್ನೂ ಮೂಲಭೂತ ಸೌಲಭ್ಯಗಳು ದೊರೆತಿಲ್ಲ. ಸೌಲಭ್ಯಗಳಿಗಾಗಿ ಸುಮಾರು 40 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಲೆಮಾರಿ ಸಮುದಾಯದ ಜನರಿದ್ದು, ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 10 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಜೀವನ ನಿರ್ವಹಣೆಗಾಗಿ ವಿವಿಧೆಡೆ ವಲಸೆ ಹೋಗುವ ಈ ಸಮುದಾಯಕ್ಕೆ ಸ್ವಂತ ಮನೆ, ನಿವೇಶನ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ದೊರೆತಿಲ್ಲ. ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಹಾಗೂ ಸಹಾಯಧನವೂ ಸಿಗುತ್ತಿಲ್ಲ ಎಂದು ಹೇಳಿದರು.
ಅಲೆಮಾರಿ ಸಮುದಾಯ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಚುನಾಯಿತ ಪ್ರತಿನಿಧಿಗಳು ಸಮುದಾಯದ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಚಳ್ಳಕೆರೆ ತಾಲ್ಲೂಕಿನ ರಂಗವ್ವನಹಳ್ಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲೆಮಾರಿಗಳು ವಾಸಿಸುತ್ತಿದ್ದರೂ ಅಲ್ಲಿನ ಜನಪ್ರತಿನಿಧಿಗಳು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ: ಬಿಸಿಯೂಟ ತಯಾರಕರ ಬಾಕಿ ವೇತನ ಬಿಡುಗಡೆಗೆ ಆಗ್ರಹ
ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಬದಲು 49 ಉಪಜಾತಿಗಳಿರುವ ವರ್ಗಕ್ಕೆ ಸೇರಿಸಲಾಗಿದೆ. ಈಗಾಗಲೇ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಸಮುದಾಯ ಮೀಸಲಾತಿ ಸೌಲಭ್ಯ ಪಡೆಯಲೂ ಹೋರಾಟ ನಡೆಸಬೇಕಾದ ಪರಿಸ್ಥಿತಿ ಇದೆ ಎಂದು ಸಚಿನ್ ತಿಳಿಸಿದರು.
ಅಲೆಮಾರಿ ಸಮುದಾಯದವರು ಟೆಂಟ್ಗಳಲ್ಲಿ, ರಸ್ತೆ ಬದಿಗಳಲ್ಲಿ ತಾಡ್ಪಾಲ್ ಶೆಡ್ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ತಮ್ಮ ಕುಲಕಸುಬುಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿರುವ ಈ ಕುಟುಂಬಗಳಿಗೆ ಇದುವರೆಗೂ ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿಗಳು ಟೆಂಟ್ಗಳಿಗೆ ಭೇಟಿ ನೀಡಿ ಭರವಸೆ ನೀಡುತ್ತಾರೆ. ನಂತರ ಸಮಸ್ಯೆಗಳನ್ನು ಕೇಳಲು ಯಾರೂ ಬರುತ್ತಿಲ್ಲ ಎಂದು ದೂರಿದರು.
ಜಿಲ್ಲಾಡಳಿತ ಮತ್ತು ಸರ್ಕಾರ ಅಲೆಮಾರಿ ಸಮುದಾಯವನ್ನು ಗುರುತಿಸಿ, ವಾಸಿಸಲು ನಿವೇಶನ ಹಾಗೂ ಮನೆ, ಮಕ್ಕಳ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಇದನ್ನೂ ಓದಿ: ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ | ಸಂಸದ ಗೋವಿಂದ ಕಾರಜೋಳ
ಸುದ್ದಿಗೋಷ್ಠಿಯಲ್ಲಿ ಅಲೆಮಾರಿ ಸಂಘದ ಅಧ್ಯಕ್ಷ ಲಕ್ಷ್ಮೀಕಾಂತ್, ಜಿಲ್ಲಾ ಸುಡುಗಾಡು ಸಿದ್ದರ ಸಂಘದ ಉಪಾಧ್ಯಕ್ಷ ಗುರುಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಗಂಗಪ್ಪ, ಮುಂಚೂಣಿ ಘಟಕದ ನಾಯಕರಾದ ಕುಮಾರ್, ರಂಗಪ್ಪ, ಬಾಬುರಾವ್, ಮಹಂತೇಶ್, ಕೃಷ್ಣಪ್ಪ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

