CHITRADURGA NEWS | 21 MARCH 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣಾ ಆವರಣದಲ್ಲಿ ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ವಾರಸುದಾರರು ಪತ್ತೆಯಾಗದ 30 ಮೋಟಾರ್ ಬೈಕ್‍ಗಳ ಬಹಿರಂಗ ಹರಾಜು ನಡೆಯಲಿದೆ.
ಇದನ್ನೂ ಓದಿ: SJM INSTITUTE ನಲ್ಲಿ AI, ಮಷಿನ್ ಲರ್ನಿಂಗ್ ವಿಭಾಗದ ಉದ್ಘಾಟನೆ
ಕೋಟೆ ಪೊಲೀಸ್ ಠಾಣೆಯ ಡಿ.ಪಿ. ಸಂಖ್ಯೆ 11/2026ರ ಅಡಿಯಲ್ಲಿ ಅಮಾನತ್ತುಪಡಿಸಿಕೊಂಡಿದ್ದ ಹಾಗೂ ಮಾಲೀಕರು ಪತ್ತೆಯಾಗದ ಈ ವಾಹನಗಳನ್ನು ಹರಾಜು ಮಾಡಲು ನ್ಯಾಯಾಲಯವು ಅನುಮತಿ ನೀಡಿದೆ.
ಆರ್.ಟಿ.ಒ ಅಧಿಕಾರಿಗಳು ಈಗಾಗಲೇ ಈ ವಾಹನಗಳ ಮೌಲ್ಯಮಾಪನ ಮಾಡಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಅನುಮೋದನೆಯ ಮೇರೆಗೆ ಹರಾಜು ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್
ಆಸಕ್ತ ಸಾರ್ವಜನಿಕರು ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣಾ ಆವರಣದಲ್ಲಿ ನಡೆಯುವ ಹರಾಜಿನಲ್ಲಿ ಭಾಗವಹಿಸಬಹುದು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

