CHITRADURGA NEWS | 18 SEPTEMBER 2026
ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರ ಅಧ್ಯಕ್ಷತೆಯಲ್ಲಿ, ಸೆ.19 ಶನಿವಾರದಂದು ಬೆಳಿಗ್ಗೆ 11:00 ಗಂಟೆಗೆ ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌಧದಲ್ಲಿ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿದೆ.
ಇದನ್ನೂ ಓದಿ:ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳೂ ಬರಪೀಡಿತ ಪಟ್ಟಿಗೆ | ಸಚಿವ ಟಿ.ರಘುಮೂರ್ತಿ
ಸಭೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ, ಪ್ರಗತಿ ಪರಿಶೀಲನೆ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಕುರಿತು ಚರ್ಚಿಸಲಾಗುವುದು.
ಸಭೆಯಲ್ಲಿ ಜಿಲ್ಲಾ ಮಟ್ಟದ ಹಾಗೂ ಹೊಳಲ್ಕೆರೆ ತಾಲ್ಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.
ಇದೇ ಮಾದರಿಯಲ್ಲಿ ಜಿಲ್ಲೆಯ ತಾಲ್ಲೂಕುಗಳಲ್ಲಿ ಶಾಸಕರು ಅಧ್ಯಕ್ಷತೆ ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು IPGRS ಪೋರ್ಟಲ್ನಲ್ಲಿ ದಾಖಲಿಸಿ, ಆನ್ಲೈನ್ ಸ್ವೀಕೃತಿ ಪತ್ರ ನೀಡಲಾಗುತ್ತದೆ. ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸಾರ್ವಜನಿಕರ ಹೊಸ ದೂರುಗಳು ಮತ್ತು ಈ ಹಿಂದೆ ವಿಲೇವಾರಿಯಾಗದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಇದನ್ನೂ ಓದಿ: ಚಿತ್ರದುರ್ಗದ ಹೊರವಲಯದಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ
ಸ್ಥಳದಲ್ಲೇ ಸವಲತ್ತು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ನಾಗರಿಕರು ಈ ಆಂದೋಲನದ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್. ರಮ್ಯ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

