
CHITRADURGA NEWS | 28 FEBRUARY 2026
ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಅತ್ಯಂತ ನಿರ್ಣಾಯಕ ಘಟ್ಟವಾಗಿದ್ದು, ಈ ಬಾರಿ ಚಿತ್ರದುರ್ಗ ಜಿಲ್ಲೆಯು ರಾಜ್ಯಮಟ್ಟದ ಫಲಿತಾಂಶದಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಒಂದನ್ನು ಅಲಂಕರಿಸುವಂತಾಗಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ ಆಶಯ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 28 | ಹತ್ತಿ ರೇಟ್ ಎಷ್ಟಿದೆ?

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ, ದ್ವಿತೀಯ ಪಿಯು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಇಂದು ಹೆಣ್ಣುಮಕ್ಕಳು ಗಂಡುಮಕ್ಕಳಿಗಿಂತಲೂ ಹೆಚ್ಚಿನ ಶ್ರಮವಹಿಸಿ ಅದ್ಭುತ ಪೈಪೋಟಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅವರು ಶ್ಲಾಘಿಸಿದರು.
ಕಳೆದ 2023ರಲ್ಲಿ ಜಿಲ್ಲೆಯು ಪಿಯು ಫಲಿತಾಂಶದಲ್ಲಿ ಶೇ. 59ರಷ್ಟು ಫಲಿತಾಂಶದೊಂದಿಗೆ 28ನೇ ಸ್ಥಾನದಲ್ಲಿತ್ತು ಮತ್ತು 2024ರಲ್ಲಿ ಫಲಿತಾಂಶ ಶೇ. 72ಕ್ಕೆ ಏರಿಕೆಯಾದರೂ ಸ್ಥಾನ 31ಕ್ಕೆ ಕುಸಿದಿತ್ತು. ಈ ಬಾರಿ ಜಿಲ್ಲೆಯ ಶೈಕ್ಷಣಿಕ ಗೌರವವನ್ನು ಹೆಚ್ಚಿಸಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಬ್ಯಾಂಕುಗಳು ಸ್ವ-ಸಹಾಯ ಗುಂಪುಗಳಿಗೆ ಹೆಚ್ಚಿನ ಸಾಲ ಸೌಲಭ್ಯ ಒದಗಿಸಿ
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಷ್ಟೇ ಸೀಮಿತವಾಗದೆ ಮುಂದೆ ನೀಟ್ ಐಎಎಸ್, ಐಪಿಎಸ್ ಪರೀಕ್ಷೆಗಳನ್ನು ಎದುರಿಸಬೇಕು ಹಾಗೂ ಮಿಲಿಟರಿ, ಪೈಲಟ್, ವೈದ್ಯಕೀಯ ಮತ್ತು ಕಾನೂನು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ರಾಷ್ಟ್ರದ ಕೀರ್ತಿ ಹೆಚ್ಚಿಸಬೇಕು ಎಂದು ಶುಭ ಹಾರೈಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
