
CHITRADURGA NEWS | 09 April 2026
ಚಿತ್ರದುರ್ಗ: ರಾಜ್ಯಾದ್ಯಂತ ಫೆ.28ರಿಂದ ಮಾ.17ರ ವರೆಗೆ ನಡೆದ 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ-1ರ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು (ಏ.9) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ.
ಫಲಿತಾಂಶವನ್ನು ಮಂಡಳಿ ವೆಬ್ಸೈಟ್ http://karresults.nic. in ನಲ್ಲಿ, ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಪ್ರಕಟಿಸಲಾಗುತ್ತದೆ.
ಇದನ್ನೂ ಓದಿ: ಕ್ರೀಡಾ ಇಲಾಖೆಯಿಂದ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ತರಬೇತಿ
ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ಆ್ಯಪ್/ಎಸ್ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿ ರವಾನಿಸಲಿದೆ.
ಫಲಿತಾಂಶದ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ 3 ಗಂಟೆ ವೇಳೆಗೆ ಕಾಲೇಜುಗಳ ಲಾಗಿನ್ಗೆ ಕಳುಹಿಸಲಾಗುತ್ತದೆ. ಈ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸುವಂತೆ ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
