PUC ಫಲಿತಾಂಶ | ಕೋಟೆನಾಡಿನಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳು ಪಾಸ್

CHITRADURGA NEWS | 10 APRIL 2024

ಚಿತ್ರದುರ್ಗ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿಂದ ಒಟ್ಟು 13,348 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಈ ಪೈಕಿ 9734 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳ ಉತ್ತೀರ್ಣರಾಗುವುದರೊಂದಿಗೆ ರಾಜ್ಯದಲ್ಲಿ 31 ಸ್ಥಾನವನ್ನು ಜಿಲ್ಲೆ ಪಡೆದುಕೊಂಡಿದೆ.

ಇದನ್ನೂ ಓದಿ: ಲಾರಿಗೆ ಖಾಸಗಿ ಬಸ್ ಡಿಕ್ಕಿ | 28 ಜನ ಜಿಲ್ಲಾಸ್ಪತ್ರೆಗೆ ದಾಖಲು

ಕಲಾ ವಿಭಾಗದಲ್ಲಿ ಜಿಲ್ಲೆಗೆ ಶೇ.57.79 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 3990 ವಿದ್ಯಾರ್ಥಿಗಳ ಪೈಕಿ 2306 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಶೇ.75.07 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 3437 ವಿದ್ಯಾರ್ಥಿಗಳ ಪೈಕಿ 2580 ವಿದ್ಯಾರ್ಥಿಗಳು ಉತ್ತೀರ್ಣರಾಗಿದಾರೆ. ವಿಜ್ಞಾನ ವಿಭಾಗದಲ್ಲಿ ಶೇ.81.88 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 5921 ವಿದ್ಯಾರ್ಥಿಗಳ ಪೈಕಿ 4848 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ಮನೆಯಿಂದಲೇ ಮತದಾನಕ್ಕೆ ಡೇಟ್ ಫಿಕ್ಸ್

ಇದರ ಹೊರತಾಗಿ ಪರೀಕ್ಷೆಗೆ ಹಾಜರಾದ 965 ಪುನಾರವರ್ತಿತ ವಿದ್ಯಾರ್ಥಿಗಳ ಪೈಕಿ 402 ಹಾಗೂ 385 ಖಾಸಗಿ ವಿದ್ಯಾರ್ಥಿಗಳ ಪೈಕಿ 123 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2023ರ ನೇ ಸಾಲಿನಲ್ಲಿ ಪಿ.ಯು.ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ.69.5 ರಷ್ಟು ಫಲಿತಾಂಶ ಲಭಿಸಿತ್ತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version