
CHITRADURGA NEWS | 09 April 2026
ಚಿತ್ರದುರ್ಗ: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಬಿಂಬಿತವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.
ಇದನ್ನೂ ಓದಿ: PU RESULT | ತುರುವನೂರು ಸರ್ಕಾರಿ ಪಿಯು ಕಾಲೇಜಿಗೆ 93.24 ಫಲಿತಾಂಶ
ಸಾಕಷ್ಟು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಉಳಿದ ವಿದ್ಯಾರ್ಥಿಗಳು ಉತ್ತಮ ಪ್ರಯತ್ನ ಮಾಡಿದ್ದಾರೆ. ಕೆಲ ವಿದ್ಯಾರ್ಥಿಗಳಿಗೆ ಅದೃಷ್ಟ ಕೈ ಕೊಟ್ಟಿದೆ.
ಕಳೆದ ವರ್ಷ ಚಿತ್ರದುರ್ಗ ಜಿಲ್ಲೆಯ ಫಲಿತಾಂಶ ತೀರಾ ಕುಸಿತ ಕಂಡಿತ್ತು. ಆದರೆ, ಈ ವರ್ಷ ತುಸು ಚೇತರಿಕೆ ಕಾಣಿಸಿದೆ. ಒಂದು ಸ್ಥಾನ ಜಿಗಿತ ಕಂಡು, ಫಲಿತಾಂಶದಲ್ಲಿ ಶೇ.20 ರಷ್ಟು ಹೆಚ್ಚಳ ಕಂಡಿರುವುದೇ ಸಮಾಧಾನಕರ ಸಂಗತಿ.
ಈ ವರ್ಷ ಜಿಲ್ಲೆ ಫಲಿತಾಂಶದಲ್ಲಿ 27ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, ಶೇ.79.12 ರಷ್ಟು ಫಲಿತಾಂಶ ದಾಖಲಿಸಿದೆ. ಕಳೆದ ವರ್ಷ ಶೇ.59.87 ಫಲಿತಾಂಶ ಪಡೆದು 28ನೇ ಸ್ಥಾನಕ್ಕೆ ಕುಸಿದಿತ್ತು.
9586 ವಿದ್ಯಾರ್ಥಿಗಳು ತೇರ್ಗಡೆ:
ಜಿಲ್ಲೆಯಲ್ಲಿ ಒಟ್ಟು 12116 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 9586 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.79.12 ಫಲಿತಾಂಶ ಬಂದಿದೆ. ತೇರ್ಗಡೆಯಾದ ವಿದ್ಯಾರ್ಥಿಗಳ ಪೈಕಿ ವಿದ್ಯಾನಿಯರ ಪ್ರಮಾಣ ಶೇ.76.04 ರಷ್ಟಿದ್ದರೆ, ಬಾಲಕರ ಸಂಖ್ಯೆ 67.38 ರಷ್ಟಿದೆ.
ಇದನ್ನೂ ಓದಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣ ಹೆಚ್ಚಳ | ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಕಲಾ ವಿಭಾಗದ ಫಲಿತಾಂಶ ಶೇ.58.58 ಬಂದಿದ್ದರೆ, ವಾಣಿಜ್ಯ ವಿಭಾಗದ ಫಲಿತಾಂಶ ಶೇ.76.99 ರಷ್ಟಿದೆ. ವಿಜ್ಞಾನ ವಿಭಾಗದ ಫಲಿತಾಂಶ ಶೇ.77.55 ರಷ್ಟಿದೆ.
ಒಟ್ಟು ಫಲಿತಾಂಶದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೇ.80.86 ರಷ್ಟು ತೇರ್ಗಡೆಯಾಗಿದ್ದರೆ, ನಗರ ಪ್ರದೇಶದ ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ 66.1 ರಷ್ಟಿದೆ. ಗ್ರಾಮೀಣ ವಿದ್ಯಾರ್ಥಿಗಳು ಪಾರಮ್ಯ ಮೆರೆದಿದ್ದಾರೆ.
ಫಲಿತಾಂಶ ಸುಧಾರಣೆಗೆ ಹರಸಾಹಸ:ಜಿಲ್ಲಾ ಪಂಚಾಯಿತಿ ಸಿಇಓ ಡಾ.ಆಕಾಶ್, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಉಪನ್ಯಾಸಕರ ಪ್ರಯತ್ನಕ್ಕೆ ತಕ್ಕಮಟ್ಟಿನ ಫಲ ಸಿಕ್ಕಿದೆ.
ಇದನ್ನೂ ಓದಿ: ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆ ಏ.12ಕ್ಕೆ
ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಕಳೆದ ವರ್ಷದಿಂದಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಹಂತದ ಅಧಿಕಾರಿಗಳು, ಉಪನ್ಯಾಸಕರು, ಪ್ರಾಚಾರ್ಯರು ಸಾಕಷ್ಟು ಪ್ರಯತ್ನ ಹಾಕಿದ್ದರು. ಜಿಲ್ಲೆಗೆ ಹೊಸದಾಗಿ ಬಂದ ಜಿಪಂ ಸಿಇಓ ಡಾ.ಎಸ್.ಆಕಾಶ್ ಫಲಿತಾಂಶ ಸುಧಾರಣೆಗೆ ಪ್ರಯತ್ನ ಮಾಡಿ ಅಧಿಕಾರಿಗಳು, ಉಪನ್ಯಾಸಕರಿಗೆ ವಿಶೇಷ ತರಬೇತಿಗಳನ್ನು ನೀಡಲು ಒತ್ತು ನೀಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
