ಪಿಯುಸಿ ಫಲಿತಾಂಶ | SRS ಕಾಲೇಜು ವಿದ್ಯಾರ್ಥಿಗಳೇ ಟಾಪರ್

ವಿಜೇತ ರೆಡ್ಡಿ, ಸಾಕ್ಷಿ, ರಿಯಾ ಎಸ್. ಕೊಠಾರಿ, ಇಶಿತಾ,

CHITRADURGA NEWS | 08 APRIL 2025

ಚಿತ್ರದುರ್ಗ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಏಪ್ರೀಲ್ 8 ರಂದು ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಚಿತ್ರದುರ್ಗದ ಎಸ್. ಆರ್. ಎಸ್. ಪಿಯು ಕಾಲೇಜು ಜಿಲ್ಲೆಯ ಮೊದಲ ಮೂರು ಸ್ಥಾನಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

Also Read: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ಕಾಲೇಜಿನ ವಿದ್ಯಾರ್ಥಿನಿ ಬಿ.ಎನ್.ಇಶಿತಾ 600 ಕ್ಕೆ 592 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ

ಎಸ್.ಬಿ.ಸಾಕ್ಷಿ 589, ವಿಜೇತ ರೆಡ್ಡಿ 589, ರಿಯಾ ಎಸ್. ಕೊಠಾರಿ 588 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಷಯವಾರು 53 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ 444 ವಿದ್ಯಾರ್ಥಿಗಳು ಶೇ.90 ಕ್ಕೂ ಅಧಿಕ ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Also Read: ಪರೀಕ್ಷೆಯಲ್ಲಿ ಫೇಲ್‌ | ವಿದ್ಯಾರ್ಥಿನಿ ಆತ್ಮಹತ್ಯೆ | ಮುಗಿಲು ಮುಟ್ಟಿದ ಹೆತ್ತವರ ಆಕ್ರಂಧನ

ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರು, ಆಢಳಿತಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version