CHITRADURGA NEWS | 19 JUNE 2026
ಚಿತ್ರದುರ್ಗ: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಇದೇ ಜೂನ್ 28 ರಿಂದ ಜುಲೈ 01ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಒಟ್ಟು 1,162 ತಂಡಗಳನ್ನು ರಚಿಸಿಕೊಳ್ಳಲಾಗಿದೆ. ಕಳೆದ ಬಾರಿ ನಡೆಸಿದ ಲಸಿಕಾ ಕೇಂದ್ರಗಳಲ್ಲಿಯೇ ಈ ಬಾರಿಯೂ ಸಹ ಎರಡು ಹನಿಗಳ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು. ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಯಶಸ್ವಿ ಮೇಲ್ವಿಚಾರಣೆಗಾಗಿ 235 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 1,27,641 ಮಕ್ಕಳನ್ನು ಲಸಿಕೆ ಹಾಕಲು ಗುರುತಿಸಲಾಗಿದೆ. ಈ ಹಿಂದೆ ಮಕ್ಕಳಿಗೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಸಹ, ಜೂನ್ 28 ರಿಂದ ಜುಲೈ 01 ರವರೆಗೆ ನಡೆಯುವ ಅಭಿಯಾನದಲ್ಲಿ ಪೋಷಕರು ಕಡ್ಡಾಯವಾಗಿ ಮತ್ತೊಮ್ಮೆ ಪೋಲಿಯೋ ಲಸಿಕೆ ಹಾಕಿಸಬೇಕು.
ಇದನ್ನೂ ಓದಿ: ಕಾಗಾಜ್ ಫೌಂಡೇಶನ್ ವತಿಯಿಂದ SSLC, PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಪಲ್ಸ್ ಪೋಲಿಯೋ ಕಾರ್ಯಕ್ರಮವ ಯಶಸ್ವಿಗೊಳಿಸಲು ಸಾರ್ವಜನಿಕರು, ಸರ್ಕಾರೇತರ ಸಂಘ ಸಂಸ್ಥೆಗಳು, ಧಾರ್ಮಿಕ ಮುಖಂಡರುಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಇತರ ಅಧಿಕಾರಿ ವರ್ಗದವರು, ಅದರಲ್ಲೂ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಸಹಕಾರ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಾಶೀ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

