
CHITRADURGA NEWS | 28 MARCH 2025
ಚಿತ್ರದುರ್ಗ: ದೆಹಲಿ ಗಡಿಯಲ್ಲಿ ಚಳುವಳಿ ನಿರತ ರೈತರ ಮೇಲೆ ಪಂಜಾಬ್ ಸರ್ಕಾರ ದೌರ್ಜನ್ಯ ನಡೆಸಿರುವುದನ್ನು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಂಯುಕ್ತ ಹೋರಾಟ ಕರ್ನಾಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
Also Read: ಹೊಳಲ್ಕೆರೆ ಪೊಲೀಸರ ಕಾರ್ಯಾಚರಣೆ | 6 ಮಂದಿ ಜೂಜುಕೋರರ ಬಂಧನ | ರೂ.2.25 ಲಕ್ಷ ಹಣ ಜಪ್ತಿ


ಕೃಷಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಒಂದು ವರ್ಷ ಐದು ತಿಂಗಳ ಕಾಲ ದೆಹಲಿಯಲ್ಲಿ ರೈತರು ಮುಷ್ಕರ ನಡೆಸಿದಾಗ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರಮೋದಿ ಭರವಸೆ ನೀಡಿ ಇದುವರೆವಿಗೂ ಕರಾಳ ಕಾಯಿದೆಗಳನ್ನು ವಾಪಸ್ ಪಡೆದಿಲ್ಲ.
ರಾಷ್ಟ್ರೀಯ ಹಿತಾಸಕ್ತಿಗಳಿಗೆ ಕಂಟಕವಾಗಿರುವ ಯುಎಸ್ ಸೇರಿದಂತೆ ಇತರೆ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳಿಗಾಗಿ ನಡೆಯುತ್ತಿರುವ ಮಾತುಕತೆಗಳನ್ನು ತಕ್ಷಣ ನಿಲ್ಲಿಸಬೇಕು.
ರೈತರು ಬೆಳೆಯುವ ಎಲ್ಲಾ ರೀತಿಯ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿಪಡಿಸಬೇಕು. ರೈತರು ಮತ್ತು ಕಾರ್ಮಿಕರ ಸಾಲಗಳನ್ನು ಮನ್ನಾ ಮಾಡುವುದು ಸೇರಿದಂತೆ ಕೃಷಿ ಮತ್ತು ಗ್ರಾಮೀಣ ವಲಯಗಳಲ್ಲಿ ವಿದ್ಯುತ್ ದರ ಹೆಚ್ಚಳ ಸ್ಮಾರ್ಟ್ ಮೀಟರ್ ಹೇರಿಕೆಯನ್ನು ಹಿಂದಕ್ಕೆ ಪಡೆಯಬೇಕು.
Also Read: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಕೊಳವೆ ಬಾವಿಗಳಿಗೆ ಉಚಿತ ವಿದ್ಯುತ್, ಗೃಹ ಬಳಕೆ ಮತ್ತು ಅಂಗಡಿಗಳಿಗೆ ಮುನ್ನೂರು ಯೂನಿಟ್ ವಿದ್ಯುತ್ ಮಂಜೂರು ಮಾಡುವಂತೆ ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸಿತು.
ಈ ಸಂದರ್ಭದಲ್ಲಿ ಕುಮಾರ್ ಸಮತಳ, ರೈತ ಮುಖಂಡ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಸತ್ಯಪ್ಪ ಮಲ್ಲಾಪುರ, ಕೆ.ಎಂ.ಕಾಂತರಾಜು, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಪುರಷೋತ್ತಮ ಸೇರಿದಂತೆ ರೈತರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
