
CHITRADURGA NEWS | 02 JULY 2025
ಚಿತ್ರದುರ್ಗ: IISc, IIT ಮತ್ತು NIT ಸಂಸ್ಥೆಗಳ ಮೂಲಕArtificial intelligence and machine learing ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ, ತರಬೇತಿ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 04 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸರ್ಕಾರದ ಆದೇಶದಂತೆ IISc, IIT ಮತ್ತು NIT ಸಂಸ್ಥೆಗಳ ಮೂಲಕArtificial intelligence and machine learing ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ರೂ.15,000/-ಗಳ ಶಿಷ್ಯವೇತನ ನೀಡಲಾಗುವುದು.
ಶಿಷ್ಯವೇತನ, ತರಬೇತಿಗಾಗಿ ಅರ್ಜಿ ಸಲ್ಲಿಸುವ ಇಚ್ಚಿಸುವ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇಯಿಂದ ಪಡೆದು ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾಯ ಪ್ರಮಾಣ ಪತ್ರ, ಬಿ.ಇ/ಬಿ.ಟೆಕ್ ಪದವಿಯ ಅಂಕಪಟ್ಟಿ, ಘಟಿಕೋತ್ಸವ ಪ್ರಮಾಣ ಪತ್ರ ದಾಖಲೆಗಳನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-225427ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
