
CHITRADURGA NEWS | 09 OCTOBER 2025
ಚಿತ್ರದುರ್ಗ: ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಸಲು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದಿಂದ ರೈತ ಉತ್ಪಾದಕ ಸಹಕಾರಿ ಸಂಘಗಳನ್ನು ಗುರುತಿಸಲಾಗಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ ಶ್ರೀರಾಂಪುರ ಪಿ.ಎ.ಸಿ.ಎಸ್ ಹಾಗೂ ಕಂಗುವಳ್ಳಿ ಎಫ್.ಪಿ.ಓ, ಹಿರಿಯೂರು ತಾಲ್ಲೂಕಿನಲ್ಲಿ ಐಮಂಗಲ ಪಿ.ಎ.ಸಿ.ಎಸ್, ಚಿತ್ರದುರ್ಗ ತಾಲ್ಲೂಕಿನಲ್ಲಿ ತುರವನೂರು ಎಫ್.ಪಿ.ಓ, ಮೊಳಕಾಲ್ಮೂರಿನಲ್ಲಿ ಟಿ.ಎ.ಪಿ.ಸಿ.ಎಂ.ಸ್ ರಾಂಪುರ ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ನೊಂದಣಿಗೆ ಅವಕಾಶವಿದೆ.
ಇದನ್ನೂ ಓದಿ: ಯುವತಿ ನಾಪತ್ತೆ | ಪತ್ತೆಗೆ ಭರಮಸಾಗರ ಪೊಲೀಸರ ಮನವಿ
ಪ್ರತಿ ರೈತರಿಂದ ಎಕರೆಗೆ 3 ಕ್ವಿಂಟಾಲ್‌ಗಳಂತೆ ಗರಿಷ್ಟ 15 ಕ್ವಿಂಟಾಲ್ ಹೆಸರು ಕಾಳು ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಕಾರ್ಯದರ್ಶಿಗಳ ಮೊಬೈಲ್ ಸಂಖ್ಯೆ ಕಂಗುವಳ್ಳಿ 9108134058, ಶ್ರೀರಾಂಪುರ 9844820821, ಐಮಂಗಲ 9986182809, ತುರವನೂರು 9620266826, ರಾಂಪುರ 9886452622 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
