CHITRADURGA NEWS | 08 JUNE 2026
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ವತಿಯಿಂದ 2026-27ನೇ ಸಾಲಿಗೆ ‘ಭೂ ಒಡೆತನ ಯೋಜನೆ’ಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿಸಲಾಗುತ್ತಿದೆ.
ಇದನ್ನೂ ಓದಿ: ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಯೋಜನೆಯಡಿ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಒಬ್ಬ ಫಲಾನುಭವಿಗೆ ತಲಾ 2 ಎಕರೆಯಂತೆ ಭೂಮಿ ಒದಗಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಂದ ಸುಮಾರು 10 ಕಿ.ಮೀ ವಿಸ್ತೀರ್ಣದ ಒಳಗಿರುವ ಜಮೀನನ್ನು ಖರೀದಿಸಲು ಇಲಾಖೆ ಮುಂದಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಹೊರತು ಪಡಿಸಿ, ಇತರೆ ಸಮುದಾಯದ ಯಾರಾದರೂ ಸರ್ಕಾರಕ್ಕೆ 2 ಎಕರೆ ಅಥವಾ 4 ಎಕರೆ ಜಮೀನನ್ನು ಮಾರಾಟ ಮಾಡಲು ಆಸಕ್ತಿ ಹೊಂದಿದ್ದರೆ, ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಎದುರು, ಸರ್ಕಾರಿ ವಸತಿ ಪಾಠಶಾಲೆ ಕಟ್ಟಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
ಜಮೀನು ಮಾರಾಟಗಾರರಿಗೆ ಪ್ರತಿ ಎಕರೆಗೆ ಸರ್ಕಾರದ ನಿಯಮಾವಳಿಗಳನ್ವಯ ಸೂಕ್ತ ದರವನ್ನು ನೀಡಿ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಎಸ್. ತಿಪ್ಪೇಸ್ವಾಮಿ ಮೊಬೈಲ್ ಸಂಖ್ಯೆ 9902327127 ಕರೆ ಮಾಡಬಹುದು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
