
CHITRADURGA NEWS | 22 FEBRUARY 2026
ಚಿತ್ರದುರ್ಗ: 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಫೆ.24ರಂದು ಹೊಸದುರ್ಗ ತಾಲ್ಲೂಕಿನ ವಿವಿಧ ಖರೀದಿ ಕೇಂದ್ರಗಳಲ್ಲಿ ಚಾಲನೆ ದೊರೆಯಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಸ್ಥಿರತೆ ಕಂಡುಕೊಂಡ ರಾಶಿ ಅಡಿಕೆ ಬೆಲೆ

ಹೊಸದುರ್ಗ ಶಾಸಕರು ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಅವರು ಖರೀದಿ ಪ್ರಕ್ರಿಯೆಯನ್ನು ಉದ್ಘಾಟಿಸುವರು. ಅಂದು ಬೆಳಿಗ್ಗೆ 10ಕ್ಕೆ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.
ಮಧ್ಯಾಹ್ನ 12ಕ್ಕೆ ಶ್ರೀರಾಂಪುರದ ದುರ್ಗದ ಸಿರಿಧಾನ್ಯ ರೈತ ಉತ್ಪಾದಕರ ಕಂಪನಿಯಲ್ಲಿ “ಸಾವೆ” ಖರೀದಿ ಕೇಂದ್ರ ಉದ್ಘಾಟಿಸಲಾಗುವುದು.
ಇದನ್ನೂ ಓದಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ SSLC ಫಲಿತಾಂಶ ಕಡಿಮೆ | ಸಚಿವ ಡಿ.ಸುಧಾಕರ್ ಅಸಮಾಧಾನ
ನಂತರ ಮಧ್ಯಾಹ್ನ 1.30ಕ್ಕೆ ಹೊಸದುರ್ಗದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಟಿ.ಎ.ಪಿ.ಸಿ.ಎಂ.ಎಸ್ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
