CHITRADURGA NEWS | 15 MAY 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಬೆಳೆ ಖರೀದಿಸಲು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ ರೂ. 7,721/- ದರವನ್ನು ನಿಗದಿಪಡಿಸಲಾಗಿದೆ. ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆ.ಒ.ಎಫ್), ಚಿತ್ರದುರ್ಗ ಇವರಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
ನೋಂದಣಿಗೆ 50 ದಿನಗಳು ಹಾಗೂ ಖರೀದಿ ಪ್ರಕ್ರಿಯೆಗೆ 60 ದಿನಗಳ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್ ನಂತೆ, ಗರಿಷ್ಠ 20 ಕ್ವಿಂಟಾಲ್ ವರೆಗೆ ಸೂರ್ಯಕಾಂತಿಯನ್ನು ಖರೀದಿಸಲಾಗುವುದು.
ಚಿತ್ರದುರ್ಗದ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರವು ಕಾರ್ಯನಿರ್ವಹಿಸಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಥವಾ ಮಾರಾಟ ಪ್ರಕ್ರಿಯೆಗಾಗಿ ಖರೀದಿ ಕೆ.ಓ.ಎಫ್. ಅಧಿಕಾರಿ ಅಯ್ಯಪ್ಪ ಡಂಬಳ ದೂರವಾಣಿ ಸಂಖ್ಯೆ: 6366975386 ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
