CHITRADURGA NEWS | 07 MAY 2026
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಮೇ 12ರಂದು ಅರ್ಹತಾ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಜಾಗೃತಿ
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಆಹ್ವಾನಿಸಲಾಗಿದೆ. ಪರೀಕ್ಷೆಯು ಮೇ 12ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ನಗರಸಭೆ ಕಾರ್ಯಾಲಯದ ಹತ್ತಿರವಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಪಿ.ಯು ಕಾಲೇಜಿನಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು/ಫೋಷಕರು ಇಲಾಖೆಯ ವೆಬ್‍ಸೈಟ್ (sw.kar.nic.in) ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬೇಕು.
ಇದನ್ನೂ ಓದಿ: ಮೇ.17 ರಂದು ಜಿಲ್ಲಾ ಯಾದವ (ಗೊಲ್ಲರ) ಸಂಘದ ಚುನಾವಣೆ | ಗುರುತಿನ ಚೀಟಿ ಪಡೆಯಲು AC ಕಾಂತರಾಜ್ ಸೂಚನೆ
ಪರೀಕ್ಷಾರ್ಥಿಗಳು ಅಂದು ಬೆಳಿಗ್ಗೆ 10 ಗಂಟೆಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

