
ಚಿತ್ರದುರ್ಗನ್ಯೂಸ್.ಕಾಂ
ಚಳ್ಳಕೆರೆ ತಾಲ್ಲೂಕಿನಲ್ಲಿ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಉಂಟಾದ ಅವ್ಯವಹಾರದ ಬಗ್ಗೆ ಶಾಸಕ ಟಿ.ರಘುಮೂರ್ತಿ ಅವರು ಬೆಳಗಾವಿಯ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಕೃಷಿ ಸಚಿವರನ್ನು ಪ್ರಶ್ನಿಸಿದ್ದಾರೆ.
ಬುಧವಾರ ಶಾಸಕರ 175ನೇ ಚುಕ್ಕೆ ಗುರುತಲ್ಲದ ಪ್ರಶ್ನೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಲಿಖಿತವಾಗಿ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಜಾತಿ ಕಾರಣಕ್ಕೆ ಆರ್ಎಸ್ಎಸ್ ಮ್ಯೂಸಿಯಂ ಪ್ರವೇಶ ನಿರಾಕರಣೆ
ಚಳ್ಳಕೆರೆ ತಾಲ್ಲೂಕಿನ ಪಿ.ಮಹಾದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಾಯಿತ ಖಾತೆದಾರರಿಗೆ ಬೆಳೆ ವಿಮೆ ಪರಿಹಾರ ನೀಡುವಲ್ಲಿ ವ್ಯತ್ಯಾಸವಾಗಿರುವ ಬಗ್ಗೆ ರೈತರು ದೂರು ನೀಡಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಚಳ್ಳಕೆರೆ ತಾಲ್ಲೂಕಿನಲ್ಲಿ 68717 ಹೆಕ್ಟೇರ್ ಪ್ರದೇಶದ 14 ವಿವಿಧ ಅಧಿಸೂಚಿತ ಬೆಳೆಗೆ ಒಟ್ಟು 44852 ಬೆಳೆವಿಮೆ ನೊಂದಣಿ ಪ್ರಸ್ತಾವನೆಗಳು ನೋಂದಣಿಯಾಗಿವೆ.
ಇದನ್ನೂ ಓದಿ: ದುರ್ಗದ ಭೂಗರ್ಭದಲ್ಲಿ ಬಹು ಬೇಡಿಕೆಯ ನಿಕ್ಷೇಪ ಪತ್ತೆ; ಪುರ್ಲಹಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ
ತಾಲ್ಲೂಕಿನ ಬೀಳು ಭೂಮಿ ಹಾಗೂ ನೋಂದಾಯಿತ ಬೆಳೆಯಲ್ಲದ ಬೇರೆ ಬೆಳೆಗಳಿಗೆ 80 ಪ್ರಕರಣಗಳಲ್ಲಿ ರೂ.67 ಲಕ್ಷಕ್ಕೂ ಹೆಚ್ಚು ಬೆಳೆವಿಮೆ ಹಣ ದುರುಪಯೋಗವಾಗಿದೆ. ಮೂಲ ಖಾತೆದಾರರ ಬದಲಿಗೆ ಬೇರೆಯೊಬ್ಬರನ್ನು ನೋಂದಣಿ ಮಾಡಿಸಿದ 2 ಪ್ರಕರಣಗಳಲ್ಲಿ ರೂ.1.90 ಲಕ್ಷ ಬೆಳೆ ವಿಮೆಹಣ ಪಡೆದ ವಂಚಿಸಲಾಗಿದೆ ಈ ಕುರಿತು ಜಿಲ್ಲಾಧಿಕಾರಿ ತನಿಖಾ ವರದಿ ನೀಡಿದ್ದಾರೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಜಾಜೂರು ಉಪ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸಿ: ಚಳ್ಳಕೆರೆ ತಾಲ್ಲೂಕು ಪರುಶುರಾಂಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಜಾಜೂರು ಉಪ ಪೊಲೀಸ್ ಠಾಣೆಯನ್ನು ಮೇಲದ್ದರ್ಜೆಗೇರಿಸುವ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪ್ರಶ್ನಿಸಿದ್ದಾರೆ.
ಜಾಜೂರು ಆಂದ್ರ ಪ್ರದೇಶ ಗಡಿಭಾಗದಲ್ಲಿದೆ. ಇಲ್ಲಿ ಅನೇಕ ವಾಹನಗಳು ಸಂಚರಿಸುತ್ತಿದ್ದು, ರಸ್ತೆ ಅಪಘಾತ ಹಾಗೂ ಕಳ್ಳತನ ಪ್ರಮಾಣ ಹೆಚ್ಚಾಗುತ್ತಿದೆ. ಉಪಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ಕೊರೆತೆ ಇದೆ. ಇದನ್ನು ಸರಿಪಡಿಸಲು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಚುಕ್ಕೆ ಗುರುತಲ್ಲದ ಪ್ರಶ್ನೆ ಸಂಖ್ಯೆ 77ರಲ್ಲಿ ಕೇಳಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ– ತುಮಕೂರು ನಡುವೆ ಏರ್ಪೋರ್ಟ್; ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಚಿಂತನೆ
ಜಾಜೂರು ಉಪಠಾಣೆ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷದಲ್ಲಿ ವಾರ್ಷಿಕವಾಗಿ ಸರಾಸರಿ 32 ಅಪಘಾತ ಮತ್ತು 126 ಅಪರಾಧ ಪ್ರಕರಣಗಳು ದಾಖಲಾಗಿವೆ. ಸದ್ಯ ಅಪಘಾತ ಹಾಗೂ ಕಳ್ಳತನ ತಡೆಗಟ್ಟಲು ಪರುಶುರಾಂಪುರ ಠಾಣೆಯಿಂದ ಅಗತ್ಯ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಮಂಗಳವಾರ ಲಿಖಿತವಾಗಿ ಉತ್ತರಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
