ಚಿತ್ರದುರ್ಗ ನ್ಯೂಸ್:
ಉಡುಪಿಯ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 13ನೇ ಶ್ರವಣ ಮಾಂದ್ಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಚಿತ್ರದುರ್ಗ ಜಿಲ್ಲೆ ಚಿಕ್ಕಬೆನ್ನೂರು ಗ್ರಾಮದ ಆರ್.ದಿಶಾ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆರ್.ದಿಶಾ ಚಿಕ್ಕಬೆನ್ನೂರು ಗ್ರಾಮದ ಅನುಪಮ-ರಾಘವೇಂದ್ರ ಅವರ ಪುತ್ರಿಯಾಗಿದ್ದು, ಮೈಸೂರಿನ ಜೆಎಸ್‍ಎಸ್ ಕಾಲೇಜಿನಲ್ಲಿ ಡಿಪ್ಲೊಮಾ ಅಧ್ಯಯನ ಮಾಡುತ್ತಿದ್ದಾರೆ.
ಈ ಹಿಂದೆಯೂ ಶ್ರವಣ ಮಾಂದ್ಯರ ಕ್ರೀಡಾಕೂಟದಲ್ಲಿ ಅಹಮದಾಬಾದ್, ಭೂಪಾಲ್‍ಗಳಲ್ಲಿ ರಾಜ್ಯ ಪ್ರತಿನಿಧಿಸಿದ್ದರು.
ಆರ್.ದಿಶಾಳ ಸಾಧನೆಯನ್ನು ಶಿಕ್ಷಕರ ಸಂಘದ ತಾಲ್ಲೂಕು ನಿರ್ದೇಶಕಿ ಗೀತಾ ಭರಮಸಾಗರ, ಗಾಯಕ ಡಿ.ಒ.ಮುರಾರ್ಜಿ, ತಾಲ್ಲೂಕು ಈಡಿಗರ ಯುವ ವೇದಿಕೆ ಅಧ್ಯಕ್ಷ ಬಾಗೇನಾಳ್ ಶ್ರೀನಿವಾಸ್ ಅಭಿನಂದಿಸಿದ್ದಾರೆ.
—

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
