
ಚಿತ್ರದುರ್ಗ ನ್ಯೂಸ್.ಕಾಂ
ರೈತರೇ ನಿಮ್ಮ ಹೊಲದಲ್ಲಿ ನೀವು ಬೆಳೆದ ಬೆಳೆ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳನ್ನು ಕಾಯುವ ಚಿಂತೆ ಇನ್ನೂ ನಿಮಗಿಲ್ಲ. ಮೊಬೈಲ್ ಆ್ಯಪ್ ಮೂಲಕ ಹಿಂಗಾರು–ಹಂಗಾಮು ಬೆಳೆ ಸಮೀಕ್ಷೆಯ ಬೆಳೆ ಮಾಹಿತಿಯನ್ನು ನೀವು ಅಪ್‌ಲೋಡ್ ಮಾಡಬಹುದಾಗಿದೆ.
ಜಿಲ್ಲೆಯಲ್ಲಿ 2023-24ನೇ ಸಾಲಿನ ಹಿಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರು ಗೂಗಲ್ ಪ್ಲೇಸ್ಟೋರ್‌ನಿಂದ Rabi Crop Survey App -2023-24 (ಹಿಂಗಾರು ರೈತರ ಬೆಳೆ ಸಮೀಕ್ಷೆ -2023) ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿ ಹಾಗೂ ಛಾಯಚಿತ್ರವನ್ನು ಅಪ್‌ಲೋಡ್ ಮಾಡಬಹುದಾಗಿದೆ.

ಇದನ್ನೂ ಓದಿ: ದತ್ತ ಪೀಠಕ್ಕೆ ದತ್ತಮಾಲಾಧಾರಿಗಳು; ವಿವಿಧೆಡೆ ಅಭಿಯಾನ
ಈ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಪಹಣಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ.
ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳು ಅಥವಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಸಹ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರಗಳನ್ನು ದಾಖಲು ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುತ್ತೀರಿ.
ಹೆಚ್ಚಿನ ಮಾಹಿತಿಗೆ ರೈತರು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ 18004253553 ಗೆ ಕರೆ ಮಾಡಬಹುದು ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ/ರೈತ ಸಂಪರ್ಕ ಕೇಂದ್ರ, ಅಥವಾ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
