CHITRADURGA NEWS | 15 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ-ನುಲೇನೂರು ಶಂಕರಪ್ಪ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಈ ಬಾರಿ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
ಪ್ರಶಸ್ತಿಯು 25 ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಅಕ್ಟೋಬರ್ ಮೊದಲವಾರ ರಾಯಚೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸದಸ್ಯ ಚಿಕ್ಕಪ್ಪನಹಳ್ಳಿ ಷಣ್ಮುಖ ಮಾಹಿತಿ ನೀಡಿದರು.
ರಾಘವೇಂದ್ರ ಕುಷ್ಟಗಿ ಅವರು ಕಲ್ಯಾಣ ಕರ್ನಾಟಕದ ಆರ್ಟಿಕಲ್ 371(ಜೆ) ಗೆ ಹೋರಾಟ ಮಾಡಿ ಯಶ ಕಂಡಿದ್ದಾರೆ. ಅಕ್ರಮ ಗಣಿಗಾರಿಕೆ, ಅನ್ಯಾಯದ ಭೂ ಸ್ವಾಧೀನ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗಾಗಿ ಎಸ್.ಆರ್.ಹಿರೇಮಠ ಅವರ ಜೊತೆಗೂಡಿ ಜನ ಸಂಗ್ರಾಮ ಪರಿಷತ್ ಸ್ಥಾಪನೆ ಮಾಡಿದ್ದರು.
ಅಕ್ರಮ ಗಣಿಗಾರಿಕೆ ವಿರುದ್ದ ರಾಯಚೂರಿನಿಂದ ಬೆಂಗಳೂರು ವರೆಗೆ ಬೃಹತ್ ಜಾಥಾ ಸಂಘಟಿಸಿದ್ದರು. ಗದಗದ ಕಪ್ಪತಗುಡ್ಡ ರಕ್ಷಣೆಗೆ ಪಶ್ಚಿಮಘಟ್ಟದಿಂದ ಆರಂಭಗೊಂಡ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಚಿಂತಕ ದೇವನೂರು ಮಹಾದೇವ. ರೈತ ಸಂಘದ ಪುಟ್ಟಣ್ಣಯ್ಯ, ಎಸ್ ಆರ್.ಹಿರೇಮಠ ಅವರ ಜೊತೆ ಸೇರಿ ಜನಾಂದೋಲನ ಮಹಾ ಮೈತ್ರಿ ಸ್ಥಾಪನೆ ಮಾಡಿದ್ದರು. 2005 ರಲ್ಲಿ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ರಾಘವೇಂದ್ರ ಕುಷ್ಟಗಿ ಅವರ ಸಾಮಾಜಿಕ ಹಾಗೂ ಕಾರ್ಮಿಕ ಹೋರಾಟವನ್ನು ಗುರುತಿಸಿ ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಷಣ್ಮುಖ ತಿಳಿಸಿದರು.
ನುಲೇನೂರು ಶಂಕರಪ್ಪ ಅವರು ಚಿತ್ರದುರ್ಗ ನೆಲದ ಗಟ್ಟಿ ಹೋರಾಟಗಾರನಾಗಿದ್ದು ರೈತ ಸಂಘಟನೆಯಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು. ಎಲ್ಲ ಸಾಮಾಜಿಕ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಚಿತ್ರದುರ್ಗ ನೆಲಕ್ಕೆ ನೀರುಣಿಸುವ ಭದ್ರಾ ಮೇಲ್ದಂಡೆಯ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಹೆಸರಿನಲ್ಲಿ ಪ್ರತಿಷ್ಠಾಪನೆ ಸ್ಥಾಪಿಸಿ ಹಸಿರು ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರತಿಷ್ಠಾನದ ಮತ್ತೋರ್ವ ಸದಸ್ಯ ಸಂಗೇನಹಳ್ಳಿ ಅಶೋಕ್ ಕುಮಾರ್ ತಿಳಿಸಿದರು.
ಇದನ್ನೂ ಓದಿ: ಗಣೇಶೋತ್ಸವದ ಅಂಗವಾಗಿ ರಕ್ತದಾನ ಶಿಬಿರ | 35 ಯುನಿಟ್ ರಕ್ತ ಸಂಗ್ರಹ
ಪ್ರತಿಷ್ಠಾನದ ಸದಸ್ಯರುಗಳಾದ ಹಿರಿಯ ಪತ್ರಕರ್ತ ಶ.ಮಂಜುನಾಥ್, ಹಂಪಯ್ಯನಮಾಳಿಗೆ ಧನಂಜಯ, ರುದ್ರಸ್ವಾಮಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

