CHITRADURGA NEWS | 27 MARCH 2026
ಚಿತ್ರದುರ್ಗ: ನಗರದ ವಾಸವಿ ಶಾಲೆ ಬಳಿಯಲ್ಲಿನ ತ್ಯಾಗರಾಜ ಬೀದಿಯಲ್ಲಿನ ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಶತಮಾನೋತ್ಸವ ಹಿನ್ನೆಲೆ ಮಾ.26 ರಿಂದ 28ರವರಗೆ ಶ್ರೀ ರಾಮೋತ್ಸವ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮೊದಲನೇ ದಿನ ದೇವಾಲಯದಲ್ಲಿ ವಿಶೇಷವಾದ ಪೂಜೆ ನಡೆಸಲಾಯಿತು. ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು.
ಮುಂಜಾನೆಯಿಂದಲೇ ದೇವಾಲಯದಲ್ಲಿ ಅಂಜನೇಯ ಸ್ವಾಮಿಗೆ ಅಭಿಷೇಕ ಮಾಡುವುದರ ಮೂಲಕ ವಿಶೇಷವಾದ ಅರ್ಚನೆ ಮಾಡಲಾಯಿತು. ತದ ನಂತರ ದೇವಾಲಯದಲ್ಲಿ ಹೋಮ ನೇರವೇರಿಸಿ ಪೂರ್ಣಾಹುತಿ ನೀಡಲಾಯಿತು.
ಈ ಸಂದರ್ಭದಲ್ಲಿ ದೇವಾಲಯಕ್ಕೆ ಆಗಮಿಸಿ ಬಿಜೆಪಿ ಮುಖಂಡ ರಘುಚಂದನ್ ಸ್ವಾಮಿಯ ದರ್ಶನ ಪಡೆದು ಪ್ರಸಾದ, ತೀರ್ಥ ಸ್ವೀಕಾರ ಮಾಡಿದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯ ಶ್ರೀರಾಮ ನವಮಿ
ಈ ವೇಳೆ ಶ್ರೀ ರಾಮೋತ್ಸವದ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಅರುಣ್ ಕುಮಾರ್, ಆನಂತರಾಮು, ವೆಂಕಟಚಲಯ್ಯ, ರಮೇಶ್, ರಾಜಾರಾವ್, ರಾಘವೇಂದ್ರರಾವ್, ನಾಗರಾಜ್ ಬೇದ್ರೇ ವೆಂಕಟೇಶ್, ವಂಸತಕುಮಾರ್, ಚಂದ್ರಶೇಖರ್‍ರಾವ್ ಸೇರಿದಂತೆ ಇತರರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
