ಮುಖ್ಯ ಸುದ್ದಿ
ಅಧಿಕಾರ ಸ್ವೀಕರಿಸಿದ ರಘುಮೂರ್ತಿ, ಗೋವಿಂದಪ್ಪ | ಅಭಿವೃದ್ಧಿಗೆ ಶ್ರಮಿಸುವ ಭರವಸೆ
CHITRADURGA NEWS | 13 FEBRUARY 2024
ಚಿತ್ರದುರ್ಗ: ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹಾಗು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಸೋಮವಾರ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಟಿ.ರಘುಮೂರ್ತಿ, ‘ಮಂಡಳಿಯ ಸೌಲಭ್ಯಗಳನ್ನು ಜನರಿಗೆ ತಲುಪಿಸಿ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರ ಸಹಕಾರ ಪಡೆಯುವ ಮೂಲಕ ಸಣ್ಣ ಕೈಗಾರಿಕೆ ಸೌಲಭ್ಯಗಳನ್ನು ಜನರಿಗೆ ಮಟ್ಟಿಸುವ ಕೆಲಸವನ್ನು ಮಾಡುತ್ತೇನೆ’ ಎಂದರು.
‘ಸಣ್ಣ ಕೈಗಾರಿಕೆಗಳು ಬಡವರ ಬದುಕನ್ನು ರೂಪಿಸುತ್ತವೆ. ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗೆ ಪ್ರಯತ್ನ ಮಾಡಲಾಗುತ್ತದೆ’ ಎಂದು ತಿಳಿಸಿದರು.
ಇದನ್ನೂ ಓದಿ: ಕ್ರಷರ್ ಮಾಲಿಕರ ಸಂಘದ ಜಿಲ್ಲಾಧ್ಯಕ್ಷನ ಮೇಲೆ ಗಣಿ ಇಲಾಖೆ ಅಧಿಕಾರಿ ಹಲ್ಲೆ
ಇದನ್ನೂ ಓದಿ: 280 ಮೀಟರ್ ಡಿವೈಡರ್ ತೆರವು | ಮುನ್ನೆಲೆಗೆ ಬಂದ ರಸ್ತೆ ವಿಸ್ತರಣೆ ಚರ್ಚೆ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಮುಖಂಡರಾದ ಸವಿತಾ ರಘು, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ವಿನಯ ತಿಮ್ಮಾಪುರ, ರಾಮಪ್ಪ, ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷ ಹಾಲೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‌ಪೀರ್, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಪ್ಪ, ಶಶಿಧರ್ ಇದ್ದರು.