ಚಿತ್ರದುರ್ಗ ನ್ಯೂಸ್.ಕಾಂ: ರಾಜ್ಯದ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ, ಸಚಿವರಾದ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಭಾನುವಾರ ಕೋಟೆನಾಡು ಚಿತ್ರದುರ್ಗದಲ್ಲಿ ಭರ್ಜರಿ ರೌಂಡ್ಸ್ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಹುಲ್ ಜಾರಕಿಹೊಳಿ ಅವರನ್ನು ಚಿತ್ರದುರ್ಗಕ್ಕೆ ಆಹ್ವಾನ ಮಾಡಲಾಗಿತ್ತು.

ಇದನ್ನೂ ಓದಿ: ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ವಾಲ್ಮೀಕಿ ನಾಯಕ ನೌಕರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನಂತರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಸಮಾಜದ ಗುರುಗಳಾದ ರಾಜನಹಳ್ಳಿ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಶಾಸಕ ಟಿ.ರಘುಮೂರ್ತಿ, ಉದ್ಯಮಿ ಪಿ.ವಿ.ಅರುಣ್, ಕಾಂಗ್ರೆಸ್ ಮುಖಂಡ ಅಂಜಿನಪ್ಪ ಅವರ ಜೊತೆಗೆ ತೆರಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಆನಂತರ ಮದಕರಿ ವೃತ್ತದಲ್ಲಿರುವ ರಾಜವೀರ ಮದಕರಿ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಸಮಾಜದ ಮುಖಂಡರು, ಶ್ರೀಗಳ ಜೊತೆಗೆ ಪೋಟೋ ಕೂಡಾ ತೆಗೆಸಿಕೊಂಡರು.

ಇದೇ ವೇಳೆ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮೃತ ಅರ್ಜುನ ಆನೆ ಸ್ಮರಣಾರ್ಥ ನಡೆಸುತ್ತಿರುವ ಹೊನಲು ಬೆಳಕಿನ ಕ್ರಿಕೇಟ್ ಟೂರ್ನಿ ಬಳಿ ತೆರಳಿ ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡು ಶುಭ ಕೋರಿದರು.
ರಾಹುಲ್ ಜಾರಕಿಹೊಳಿ ಚಿತ್ರದುರ್ಗದಲ್ಲಿ ಭಾಗವಹಿಸಿದ ಮೊದಲ ಕಾರ್ಯಕ್ರಮ ಇದಾಗಿದ್ದು, ಮುಂದೆ ಅಪ್ಪನಂತೆ ಮಗನೂ ಸಕ್ರೀಯ ರಾಜಕಾರಣಕ್ಕೆ ಬರುವ ಮುನ್ಸೂಚನೆ ಇದಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
