CHITRADURGA NEWS | 28 MAY 2025
ಚಿತ್ರದುರ್ಗ: ರೈಲ್ವೆ ಇಲಾಖೆಯ ಸೆಕ್ಯೂರಿಟಿ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಆಸಕ್ತ ಮಾಜಿ ಸೈನಿಕರಿಗೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ 27ರವರಗೆ ಕಾಲಾವಕಾಶ ನೀಡಲಾಗಿತ್ತು.
Also Read: ಹಣ್ಣು, ತರಕಾರಿ ಮಾರಾಟ ಮಾಡಲು ಮಳಿಗೆ ಲಭ್ಯ
ಒಟ್ಟು 48 ಮಾಜಿ ಸೈನಿಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿರುತ್ತಾರೆ.
ನೋಂದಾಯಿತರ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಹಾಕಲಾಗಿದ್ದು, ಈ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದರೆ ಇದೇ ಮೇ30 ಒಳಗೆ ಕಚೇರಿಯಲ್ಲಿ ಸಲ್ಲಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

