ಮುಖ್ಯ ಸುದ್ದಿ
ಶಿವಮೊಗ್ಗ ಚಿತ್ರದುರ್ಗ ನಡುವೆ ರೈಲು ಮಾರ್ಗ | ಬಿ.ವೈ.ರಾಘವೇಂದ್ರ ಪ್ರಸ್ತಾವನೆ

CHITRADURGA NEWS | 17 JANUARY 2025
ಚಿತ್ರದುರ್ಗ: ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯನ್ನು ಕೇಂದ್ರವಾಗಿಟ್ಟುಕೊಂಡು ಈಗಾಗಲೇ ಬಹುತೇಕ ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯಲ್ಲಿ ಹಾದು ಹೋಗಿವೆ.
ಈಗ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ನಿರ್ಮಾಣವಾಗುತ್ತಿದ್ದು, ಕಾಮಗಾರಿ ಮುಕ್ತಾಯವಾಗಿ ರೈಲು ಓಡಾಟ ಶುರುವಾದರೆ ಸಂಪರ್ಕ ಕ್ರಾಂತಿಯೇ ಪ್ರಾರಂಭವಾಗಲಿದೆ.

ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿ ಹುದ್ದೆ | 1:1 ಆಯ್ಕೆಪಟ್ಟಿ ಪ್ರಕಟ | ಆಕ್ಷೇಪಣೆಗೆ ಅವಕಾಶ
ಈ ನಡುವೆ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿರುವ ಗೋವಿಂದ ಕಾರಜೋಳ ಅವರು, ಬಿಜಾಪುರ ಜಿಲ್ಲೆಯ ಆಲಮಟ್ಟಿಯಿಂದ ಚಿತ್ರದುರ್ಗ ಸಂಪರ್ಕಿಸುವ ರೈಲು ಮಾರ್ಗ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಬೇಡಿಕೆ ಸಲ್ಲಿಸುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಈ ಮಾರ್ಗ ನಿರ್ಮಾಣವಾದರೆ, ಉತ್ತರ ಹಾಗೂ ಕಲ್ಯಾಣ ಕರ್ನಾಟಕದಿಂದ ಚಿತ್ರದುರ್ಗಕ್ಕೆ ದೊಡ್ಡ ಸಂಪರ್ಕ ಸೇತುವೆ ನಿರ್ಮಾಣವಾದಂತಾಗುತ್ತದೆ. ಇಲ್ಲಿಂದ ಮಲೆನಾಡು, ಕರಾವಳಿ, ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗಕ್ಕೂ ಬಹುಬೇಗ ತಲುಪಬಹುದು.
ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ರೈಲು:
ಇದೆಲ್ಲದರ ನಡುವೆ ಮಲೆನಾಡು ಶಿವಮೊಗ್ಗ ಜಿಲ್ಲೆಯಿಂದ ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗ ನಿರ್ಮಾನಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಚಿಂತನೆ ನಡೆಸಿದ್ದಾರೆ.
ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಮತ್ತೆ ಜಿಗಿತ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಜಂಕ್ಷನ್ ವರೆಗೆ ರೈಲು ಮಾರ್ಗ ನಿರ್ಮಾಣ ಮಾಡುವ ಬಗ್ಗೆ ಕೇಂದ್ರದ ರೈಲ್ವೇ ಖಾತೆ ಸಚಿವ ವಿ.ಸೋಮಣ್ಣ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಂಸದ ಬಿ.ವೈ.ರಾಘವೇಂದ್ರ, ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ನೂತನ ರೈಲು ಮಾರ್ಗ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ಕಡೆಯಿಂದ ನಯಾಪೈಸೆ ಪಡೆದಿಲ್ಲ | ರೇಣುಕಸ್ವಾಮಿ ಕುಟುಂಬ
ಭದ್ರಾವತಿಯಿಂದ ಚಿಕ್ಕಜಾಜೂರು ಜಂಕ್ಷನ್‍ಗೆ 80 ಕಿ.ಮೀ ಅಂತರವಿದ್ದು, ಚನ್ನಗಿರಿ ಮೂಲಕ ರೈಲು ಮಾರ್ಗ ನಿರ್ಮಾಣವಾದರೆ, ಚಿತ್ರದುರ್ಗ, ಬಳ್ಳಾರಿ, ಗುಂತಕಲ್, ಹೈದರಾಬಾರ್, ಮಂತ್ರಾಲಯ ಸಂಪರ್ಕಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
